ವೀರಾಜಪೇಟೆ, ಸೆ. ೩೦: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ, ಗೋಣಿಕೊಪ್ಪ ಕಾವೇರಿ ದಸರಾದ ಮಹಾಪೋಷಕರಾದ ಎ.ಎಸ್. ಪೊನ್ನಣ್ಣ ಅವರನ್ನು ಗೋಣಿಕೊಪ್ಪ ದಸರಾ ಸಮಿತಿ ವತಿಯಿಂದ ವೀರಾಜಪೇಟೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ ಫಲ ತಾಂಬೂಲದೊAದಿಗೆ ಆಹ್ವಾನ ಪತ್ರಿಕೆ ನೀಡಿ ದಸರಾ ಹಬ್ಬಕ್ಕೆ ಸಾಂಪ್ರದಾಯಿಕ ವಾಗಿ ಆಹ್ವಾನಿಸಲಾಯಿತು.
ಈ ಸಂದರ್ಭ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಖಜಾಂಚಿ ಧ್ಯಾನ್ ಸುಬ್ಬಯ್ಯ, ಉಪಾಧ್ಯಕ್ಷ ಶಿವಾಜಿ, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ, ಸನತ್ ದೇವಯ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು.