ವೀರಾಜಪೇಟೆ, ಸೆ. ೩೦: ವೀರಾಜಪೇಟೆ ಗೌರಿ-ಗಣೇಶ ಜನೋತ್ಸವ ಸಮಿತಿ ವತಿಯಿಂದ ‘ಇಂಧನ ಉಳಿಸಿ, ರಾಷ್ಟç ರಕ್ಷಿಸಿ’ ಘೋಷವಾಕ್ಯದಡಿಯಲ್ಲಿ ಗಣೇಶೋತ್ಸವ ಅಂಗವಾಗಿ ಸೈಕಲ್ ಜಾಥಾ ನಡೆಯಿತು.

ಸೈಕಲ್ ಜಾಥಾವನ್ನು ವೀರಾಜಪೇಟೆ ಶಾಸಕ ಹಾಗೂ ಜನೋತ್ಸವ ಸಮಿತಿಯ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ಕೊಮ್ಮೆತೋಡುವಿನಲ್ಲಿ ಆರಂಭವಾದ ಸೈಕಲ್ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಪುರಭವನವನ್ನು ತಲುಪಿತು.

ಸೈಕಲ್ ಜಾಥಾದಲ್ಲಿ ವೀರಾಜಪೇಟೆ ಹಾಗೂ ಸುತ್ತಮುತ್ತಲಿನ ಆಸಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭ ಜನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಬರೀಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಪುರಸಭೆ ಸದಸ್ಯರುಗಳಾದ ರಾಜೇಶ್ ಪದ್ಮನಾಭ, ರಜನಿಕಾಂತ್, ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಹನೀಫ್, ಕೊಮ್ಮೆತೋಡು ಸುತ್ತಮುತ್ತಲಿನ ಗ್ರಾಮದ ಪ್ರಮುಖರು ಹಾಜರಿದ್ದರು.