ಮಡಿಕೇರಿ, ಅ. ೧: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಫೀ. ಮಾ. ಕಾರ್ಯಪ್ಪ ಕಾಲೇಜಿನಲ್ಲಿ ಡಾ. ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ೮೦ನೇ ಮಡಿಕೇರಿ, ಅ. ೧: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಫೀ. ಮಾ. ಕಾರ್ಯಪ್ಪ ಕಾಲೇಜಿನಲ್ಲಿ ಡಾ. ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ೮೦ನೇ ಸೈದ್ಧಾಂತಿಕ ನಿರೂಪಣೆಗಳನ್ನು ಬದಿಗೊತ್ತಿ ಸಮನ್ವಯತೆಯ ಹಾದಿಯನ್ನು ನಾ. ಡಿಸೋಜ ಅವರು ತಮ್ಮ ಬದುಕು ಮತ್ತು ಬರಹದಲ್ಲಿ ಸಾಧಿಸಿ ತೋರಿಸಿದರು. ಅವರ ಸಾಹಿತ್ಯ ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿಯ ಆಕರಗಳೆಂದು ತಿಳಿಸಿದ ಮುಸ್ತಫ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅವರ ಬರಹಗಳನ್ನು ಓದಬೇಕು ಎಂದು ಸಲಹೆಯಿತ್ತರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ಪ್ರೊ. ಕೃಷ್ಣ ಎಂ.ಪಿ. ಅವರು ಡಾ. ನಾ. ಡಿಸೋಜ ಅವರ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯಿತ್ತರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಪರಿಷತ್ತಿನ ಚಟುವಟಿಕೆಯಲ್ಲಿ ಭಾಗವಹಿಸಬೇಕು. ನಾ. ಡಿಸೋಜ ಅವರ ಮಕ್ಕಳ ಸಾಹಿತ್ಯಕ್ಕೆ ಸಂಬAಧಿಸಿದ ಕೃತಿಗಳನ್ನು ಹೆಚ್ಚು ಹೆಚ್ಚು ಓದಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡಗಿನ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಸ್ಥಾನವನ್ನು ಯಕ್ಷಿತಾ ಪಿ.ಜಿ. ಪೊನ್ನಂಪೇಟೆ, ದ್ವಿತೀಯ ಸ್ಥಾನವನ್ನು ಸ್ಪಂದನಾ ಆರ್.ಎಸ್. ಕುಶಾಲನಗರ, ತೃತೀಯ ಸ್ಥಾನವನ್ನು ಕೆ. ಮೇಘಶ್ರೀ ಮದೆನಾಡು ಪಡೆದುಕೊಂಡರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ಕುಮಾರ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಂಡಿದ್ದರು.
ದ್ವಿತೀಯ ಕನ್ನಡ ಐಚ್ಛಿಕ ವಿದ್ಯಾರ್ಥಿಗಳಾದ ತೇಜ ಮತ್ತು ಅಶ್ಮಿತ ನಿರೂಪಿಸಿದರು. ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ ಡಾ. ಕರುಣಾಕರ ಎನ್.ವಿ. ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಮುಖೇಶ್, ರಾಜೀವ್ ಉಪಸ್ಥಿತರಿದ್ದರು.