ಸೋಮವಾರಪೇಟೆ, ಸೆ. ೩೦: ಪಟ್ಟಣದ ಸ್ವಚ್ಛತೆಯ ಜವಾಬ್ದಾರಿ ಯನ್ನು ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸಮಸ್ಯೆಗಳನ್ನು ಆದ್ಯತೆಯ ಮೇರೆ ಬಗೆಹರಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ ಪ.ಪಂ.ಸಭಾAಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌರ ಕಾರ್ಮಿಕರ ಖಾಯಮಾತಿ ಮತ್ತು ನಿವೇಶನ ಹಂಚಿಕೆ ಬಗ್ಗೆ ಈವರೆಗೆ ಆಗಿರುವ ಕ್ರಮಗಳ ಬಗ್ಗೆ ವರದಿ ನೀಡಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತಾಂತ್ರಿಕ ಸಮಸ್ಯೆಗಳಿದ್ದರೆ ಜಿಲ್ಲಾಧಿಕಾರಿ ಗಳೊಂದಿಗೆ ಚರ್ಚಿಸಿ ಬಗೆಹರಿಸ ಲಾಗುವುದು ಎಂದು ಭರವಸೆ ನೀಡಿದ ಅವರು, ಈ ಬಾರಿಯ ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಉಚಿತವಾಗಿ ತಾನೇ ಆಯೋಜಿಸುತ್ತೇನೆ ಎಂದರು.
ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್ ಮಾತನಾಡಿ, ಪೌರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯಾಧಿಕಾರಿ ನಾಚಪ್ಪ ಅವರು, ಪೌರ ಕಾರ್ಮಿಕರು ಮೊದಲು ತಮ್ಮ ಆರೋಗ್ಯ ಸುರಕ್ಷತೆ ಮಾಡಿಕೊಳ್ಳಬೇಕು. ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಸ್ವಚ್ಚತೆಯ ಕೆಲಸವನ್ನು ಕೀಳಾಗಿ ಕಾಣಬಾರದು. ಪ.ಪಂ.ನ ಪೌರ ಕಾರ್ಮಿಕರಿಗೆ ಪ್ರತಿ ವರ್ಷ ಸ್ವೆಟ್ಟರ್, ಗಂಬೂಟ್ ನೀಡುತ್ತಿದ್ದೇವೆ. ಗೃಹ ಭಾಗ್ಯ ಯೋಜನೆಯಡಿ ಮನೆ ಕಟ್ಟಲು ೭.೫ ಲಕ್ಷ ನೀಡಲಾಗುತ್ತಿದೆ. ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗುತ್ತಿದೆ. ಪ್ರತಿ ದಿನ ಬೆಳಗ್ಗಿನ ಉಪಹಾರ ನೀಡಲಾಗುತ್ತಿದೆ ಎಂದರು.
ಪೌರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ವಿದ್ಯಾರ್ಥಿ ವೇತನ, ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಕಾರ್ಮಿಕರು ತಮ್ಮ ಕೆಲಸವನ್ನು ಶ್ರದ್ದೆಯಿಂದ ಮಾಡಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರ ಕೆಲಸ ಖಾಯಂ ಆಗಬಹುದು. ಸಾರ್ವಜನಿಕರೂ ಸಹ ಶುಚಿತ್ವಕ್ಕೆ ಮಹತ್ವ ನೀಡಬೇಕು. ಪ.ಪಂ.ಮಾಡಲಿ ಎಂಬ ಉದಾಸೀನತೆ ಇರಬಾರದು ಎಂದರು.
ಸದಸ್ಯೆ ಶೀಲಾ ಡಿಸೋಜ ಮಾತನಾಡಿ, ಪೌರ ಕಾರ್ಮಿಕರಿಗೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ತಲುಪಿಸಬೇಕು. ಕಾರ್ಮಿಕರಿಗೆ ನಿವೇಶನ ನೀಡಲು ಪ.ಪಂ.ನಿAದ ಕ್ರಮ ವಹಿಸಲಾಗುತ್ತಿದೆ ಎಂದರು.
ಪ.ಪA. ಸಿಬ್ಬಂದಿ ಮನೋಜ್ ಮಾತನಾಡಿ, ಹೊರಗುತ್ತಿಗೆ ಪೌರ ಕಾರ್ಮಿಕರನ್ನು ವಯೋನಿವೃತ್ತಿಗೂ ಮುನ್ನ ಖಾಯಂಗೊಳಿಸಬೇಕು. ಕೆಲಸ ಮಾಡುತ್ತಿರುವ ಸಂದರ್ಭವೇ ನಿವೇಶನ ಒದಗಿಸಬೇಕೆಂದು ಮನವಿ ಮಾಡಿದರು.
ಸದಸ್ಯರುಗಳಾದ ಜಯಂತಿ ಶಿವಕುಮಾರ್, ಪಿ.ಕೆ. ಚಂದ್ರು, ಮಾಜಿ ನಾಮನಿರ್ದೇಶನ ಸದಸ್ಯ ಎಸ್.ಮಹೇಶ್ ಅವರುಗಳು ಮಾತನಾಡಿದರು. ಪೌರ ಕಾರ್ಮಿಕ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಬಿ.ಆರ್. ಮೃತ್ಯುಂಜಯ, ಬಿ.ಆರ್. ಮಹೇಶ್, ಮೋಹಿನಿ, ಜೀವನ್, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ಅಭಿಯಂತರ ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪ.ಪಂ.ನಿAದ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.