ಮೂರ್ನಾಡು, ಸೆ. ೩೦: ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ ೧೫ನೇ ವರ್ಷದ ಓಣಂ ಹಬ್ಬಾಚರಣೆಯು ವಿಜೃಂಭಣೆಯಿAದ ಜರುಗಿತು.
ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭ ವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜ ಬಾಂಧವರೆಲ್ಲರೂ ಕೂಡಿ ಸಂಘದ ಮುಖಾಂತರ ಓಣಂ ಹಬ್ಬವನ್ನು ವಿಜೃಂಭಣೆಯಿAದ ಆಚರಿಸುವುದು ಸಮಾಜದ ಒಗ್ಗಟ್ಟನ್ನು ಎತ್ತಿಹಿಡಿಯುತ್ತದೆಯಲ್ಲದೆ, ತಮ್ಮ ಸಮಾಜದ ಆಚಾರ-ವಿಚಾರ, ಸಂಸ್ಕೃತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಹೇಳಿದರು.
ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಹಿಂದೂಗಳಾದ ನಾವು ತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜ ಗಟ್ಟಿಗೊಳ್ಳುತ್ತದೆ. ಹೀಗೆ ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊAಡಾಗ ದೇಶವು ಸಹ ಅಭಿವೃದ್ಧಿ ಹೊಂದುತ್ತದೆ ಎಂದರು.
ಸಮಾರAಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ವಿ.ಎಂ.
ವಿಜಯನ್,
ಜಿಲ್ಲಾ ಸಮಿತಿಯ ಮುಖ್ಯ ಕಾರ್ಯ ದರ್ಶಿ ಪಿ.ಕೆ. ಶಶಿಕುಮಾರ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತ ಹಾಗೂ ಮಡಿಕೇರಿ ತಾಲೂಕು ಎಸ್ಎನ್ಡಿಪಿಯ ಅಧ್ಯಕ್ಷ ವಾಸುದೇವನ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಮತ್ತು ಹಿಂದೂ ಮಲಯಾಳಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ರಂಗೋಲಿ(ಪೂಕಳA) ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು. ಪ್ರತಿ ವರ್ಷ ತಿರುವಾದಿರ ನೃತ್ಯವನ್ನು ತರಬೇತಿ ನೀಡುವ ಸುಜಾತ ಗೋಪಿ ಮತ್ತು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭಕ್ಕೂ ಮುನ್ನ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು.
ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಟಿ.ಕೆ. ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಓಣಂ ಭಕ್ಷö್ಯ ಭೋಜನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಟಿ.ಸಿ. ನಾಗರಾಜ್, ಮೂರ್ನಾಡು