ಮುಳ್ಳೂರು, ಅ. ೧: ಗ್ರಾಮದ ಜನರಲ್ಲಿ ಒಗ್ಗಟ್ಟಿದ್ದರೆ ಮಾತ್ರ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅಭಿಪ್ರಾಯಪಟ್ಟರು. ಕಣಿವೆ-ಬಸವನಹಳ್ಳಿ ಗ್ರಾಮಸ್ಥರು ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಮೂರ್ತಿ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವರ ಆರಾಧನೆ, ಅಧ್ಯಾತ್ಮಿಕ ಚಿಂತನೆಯಿAದ ಸಂಸ್ಕೃತಿ, ಸಂಸ್ಕಾರ ಉಳಿಯುತ್ತದೆ. ಈ ನಿಟ್ಟಿನಲ್ಲಿ ಕಣಿವೆ-ಬಸವನಹಳ್ಳಿ ಗ್ರಾಮಸ್ಥರು ಹಮ್ಮಿಕೊಂಡಿರುವ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಗ್ರಾಮಸ್ಥರೆಲ್ಲರೂ ಭಾಗಿಯಾಗಿರುವುದು ಒಗ್ಗಟ್ಟಿನ ಸಂಕೇತವಾಗಿದ್ದು ಮಾದರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷೆ ರಾಜಮ್ಮ ರುದ್ರಯ್ಯ, ಪ್ರಮುಖರಾದ ಅಶೋಕ್, ಎನ್.ಬಿ. ನಾಗಪ್ಪ, ಕೊಮರಪ್ಪ, ಗೌರಿ ಗಣೇಶ ಸೇವಾ ಸಮಿತಿ ಅಧ್ಯಕ್ಷ ಹರೀಶ್ ಮುಂತಾದವರು ಹಾಜರಿದ್ದರು.