ಅ. ೧: ಪೊನ್ನಂಪೇಟೆ ತಾಲೂಕು ಪೊರಾಡು ಗ್ರಾಮದಲ್ಲಿ ರಿವರ್ ಸೈಡ್ ಅಸೋಸಿಯೇಷನ್ ಆಶ್ರಯದಲ್ಲಿ ಕೈಲ್‌ಪೊಳ್ದ್ ಸಂತೋಷ ಕೂಟ ಮತ್ತು ಕ್ರೀಡಾಕೂಟ ನಡೆಯಿತು.

ಕ್ರೀಡಾಕೂಟವನ್ನು ತೆಂಗಿನಕಾಯಿ ಒಡೆಯುವ ಮೂಲಕ ಹಿರಿಯರಾದ ಬಲ್ಯಮೀದೇರಿರ ಟನಾಚಪ್ಪ ಅವರು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳೆ ಯರು ಮಕ್ಕಳು ಪಾಲ್ಗೊಂಡಿದ್ದರು. ಅಸೋಸಿಯೇಷನ್ ಅಧ್ಯಕ್ಷ ಮೀದೇರಿರ ಕುಟ್ಟಪ್ಪ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಸಂಸ್ಥೆಯಿAದ ಕ್ರೀಯಾಶೀಲ ಕಾರ್ಯಕ್ರಮ ಹಮ್ಮಿಕೊಳ್ಳುವುದಕ್ಕೆ ಎಲ್ಲರ ಸಹಕಾರ ಕೋರಿದರು.

ಮೀದೇರಿರ ಸಾಕ್ಷಿ ಸೋಮಣ್ಣ, ಸೃಷ್ಟಿ ಸೋಮಣ್ಣ ಪ್ರಾರ್ಥಿಸಿದರು. ಗೌರವ ಕಾರ್ಯದರ್ಶಿ ಬಲ್ಯಮೀದೇರಿರ ಮೋಹನ್ ಕುಮಾರ್ ಸ್ವಾಗತಿಸಿ, ವಂದಿಸಿದರು. ವಿವಿಧ ಆಟೋಟ, ಮನೋರಂಜನಾ ಕಾರ್ಯಕ್ರಮ ನಡೆಯಿತು.