ಪೆರಾಜೆ, ಅ. ೧: ಇಲ್ಲಿಗೆ ಸಮೀಪದ ಕುಂಬಳಚೇರಿ ಅಂಗನವಾಡಿ ಕೇಂದ್ರದಲ್ಲಿ ರಾಷ್ಟಿçÃಯ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ, ಮಾತೃವಂದನಾ ಸಪ್ತಾಹ ಇತ್ತೀಚೆಗೆ ನಡೆಯಿತು.
ಆರೋಗ್ಯ ಸುರಕ್ಷಣಾ ಅಧಿಕಾರಿ ಶೈಲಜಾ ಪೌಷ್ಟಿಕ ಆಹಾರ ಹಾಗೂ ಇತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯ ಉದಯಚಂದ್ರ ಕುಂಬಳಚೇರಿ, ಶಾಲಾ ಮುಖ್ಯೋಪಾಧ್ಯಾಯಿನಿ ರಾಜು, ಬಾಲವಿಕಾಸ ಸಮಿತಿ ಅಧ್ಯಕ್ಷೆ ವನಿತಾ ಎನ್.ಹೆಚ್. ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆ ಯುವಕಲಾ ಅಂಗನವಾಡಿಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿವಿಧ ಪೌಷ್ಟಿಕ ಆಹಾರಗಳ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ಜಯಶ್ರೀ ಹಾಗೂ ಪುಟಾಣಿ ಚರೀಷ್ಮ ಪ್ರಾರ್ಥಿಸಿದರು. ಅಂಗನವಾಡಿ ಕಾರ್ಯಕರ್ತೆ ಯುವಕಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಗ್ರಾ.ಪಂ. ಸದಸ್ಯ ಪ್ರವೀಣ್, ಆಶಾ ಕಾರ್ಯಕರ್ತೆ ಹೇಮಲತಾ, ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.