ನಾಪೋಕ್ಲು, ಅ. ೧: ಭಾಗಮಂಡಲದ ಮೇಲ್ಸೇತುವೆ ಕಾಮಗಾರಿಯಿಂದಾಗಿ ಜನರು ಬವಣೆ ಪಡುವಂತಾಗಿದೆ. ಭಾನುವಾರ ಅಧಿಕ ಸಂಖ್ಯೆಯ ಪ್ರವಾಸಿಗರು ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಗಳಿಗೆ ಭೇಟಿ ನೀಡಿದ್ದು ಭಾಗಮಂಡಲದಲ್ಲಿ ವಾಹನಗಳ ದಟ್ಟಣೆ ಉಂಟಾಯಿತು. ವಾಹನಗಳು ಚಲಿಸಲಾರದೆ ಸವಾರರು ಪರದಾಡಿದರು.
ಕಾವೇರಿ ತೀರ್ಥೋದ್ಭವದ ದಿನ ಸಮೀಪಿಸುತ್ತಿದ್ದು ಜಾತ್ರೆಯ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಲೇ ವಾಹನ ದಟ್ಟಣೆ ಉಂಟಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಬಿಗಡಾಯಿಸಲಿದ್ದು ವಾಹನದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. -ದುಗ್ಗಳ