ಸೋಮವಾರಪೇಟೆ, ಅ.೧ : ಸಮಾಜ ಸುಧಾರಕರಾದ ಶ್ರೀ ನಾರಾಯಣ ಗುರುಗಳು ಕೇವಲ ಒಂದು ಜಾತಿ- ಧರ್ಮಕ್ಕೆ ಸೀಮಿತವಾಗದೆ, ಇಡೀ ಮಾನವ ಕುಲದ ಉದ್ಧಾರಕ್ಕೆ ಶ್ರಮಿಸಿದ ಮೇರು ದಾರ್ಶನಿಕ. ಇವರ ಆದರ್ಶವನ್ನು ಎಲ್ಲರೂ ಪಾಲಿಸುವಂತಾಗಬೇಕು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವÀ ಮಧು ಬಂಗಾರಪ್ಪ ಕರೆ ನೀಡಿದರು.
ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಓಣಂ ಉತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯೆ ಕಲಿಯುವುದರ ಮೂಲಕ ಸ್ವತಂತ್ರರಾಗಿ ಎಂದು ಹೇಳಿದ ನಾರಾಯಣ ಗುರುಗಳು ಸ್ವತಃ ದಮನಿತರ ಧ್ವನಿಯಾಗಿದ್ದರು ಎಂದ ಸಚಿವರು, ಕೇರಳ ರಾಜ್ಯವು ಶೈಕ್ಷಣಿಕ ಕ್ಷೇತ್ರದಲ್ಲಿ ಇಂದಿಗೂ ಸಾಧನೆ ಮಾಡುತ್ತಿದ್ದರೆ ಅದರ ಶ್ರೇಯಸ್ಸು ನಾರಾಯಣ ಗುರುಗಳಿಗೆ ಸಲ್ಲಬೇಕು. ಅವರ ತತ್ವ ಸಿದ್ದಾಂತಗಳು ಮನೆ ಮನೆಗೆ ತಲುಪಬೇಕು ಎಂದರು.
ಕೇರಳ ರಾಜ್ಯದಲ್ಲಿ ತುಳಿತ ಕ್ಕೊಳಗಾದ ಜನರ ಸಬಲೀಕರಣಕ್ಕೆ ಶ್ರಮಿಸಿದ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಯುವ ಸಮುದಾಯ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು. ತಾಲೂಕು ಹಿಂದೂ ಮಲಯಾಳಿ ಸಂಘದವರ ಮನವಿಯಂತೆ ಬಿಸಿಎಂ ಹಾಸ್ಟೆಲ್, ಸಮುದಾಯ ಭವನ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ ನೂತನವಾಗಿ ೬೦೦ ಕನ್ನಡ ಪಬ್ಲಿಕ್ ೩ಆರನೇ ಪುಟಕ್ಕೆ
(ಮೊದಲ ಪುಟದಿಂದ) ಶಾಲೆ ಗಳನ್ನು ತೆರೆಯಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ೬ ಸಾವಿರ ಶಾಲೆಗಳನ್ನು ಪ್ರಾರಂಭಿಸುವ ಗುರಿ ಇದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿ.ಎಂ.ವಿಜಯ ವಹಿಸಿದ್ದರು. ಸೋಲೂರು ಆರ್ಯ, ಈಡಿಗ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕೇರಳ ಕಾಂಞAಗಾಡ್ ಗೃಹಸ್ಥಾಶ್ರಮದ ಶ್ರೀ ಗಂಗಾಜೀ ನಾಯರ್, ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ಗೌಡ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಾಜೀ ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ, ಸಂಘದ ಹಿರಿಯ ಸಲಹೆಗಾರ ಟಿ.ಕೆ.ಸಾಯಿಕುಮಾರ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶಶಿಕುಮಾರ್, ಓಣಂ ಉತ್ಸವ ಸಮಿತಿ ಅಧ್ಯಕ್ಷ ಪಿ.ಡಿ.ಪ್ರಕಾಶ್, ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮುರುಳಿ, ಸಮುದಾಯದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿಂಗಾರಿ ಮೇಳ ವಾದ್ಯಗೋಷ್ಠಿ ಯೊಂದಿಗೆ ಆಕರ್ಷಕ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು. ಪೂಕಳಂ ಸ್ಪರ್ಧೆ, ನೃತ್ಯ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.