ಕಡಂಗ, ಅ. ೧: ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಕಡಂಗ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.
ಕಡಂಗ ಮೊಹಿಯದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿಯ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭ ಮಸೀದಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಮಸೀದಿ ಅಧ್ಯಕ್ಷ ಅಬ್ದುಲ್ಲಾ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ತದನಂತರ ಅರಪಟ್ಟು ಗ್ರಾಮದಲ್ಲಿರುವ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ ನೆರಪಂಡ ಚಿತ್ರ ಬೆಳ್ಳಿಯಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಕಡಂಗ ಪಟ್ಟಣದಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದ ಶಾಸಕರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಮಸೀದಿಯ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫಾ, ಉಪಾಧ್ಯಕ್ಷ ಉಸ್ಮಾನ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಅಲ್ಪಸಂಖ್ಯಾತ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫಾ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಸದಸ್ಯರಾದ ಸುಬಿರ್ ಸಿ.ಇ, ಶಾಫಿ ಎಡಪಾಲ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.