ಸೋಮವಾರಪೇಟೆ, ಅ. ೧: ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಾಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಇಲ್ಲಿನ ಸಂತ ಜೊಸೇಫರ ಕಾಲೇಜಿನ ವಿದ್ಯಾರ್ಥಿನಿ ಸುಪ್ರಿತ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಇವರು ಸೋಮವಾರಪೇಟೆಯ ಲೋಕೇಶ್ ಹಾಗೂ ಶೋಭಾ ದಂಪತಿಯ ಪುತ್ರಿಯಾಗಿದ್ದು, ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆದಿರುತ್ತಾರೆ.