ಮಡಿಕೇರಿ, ಅ. ೨: ನಗರದ ೧೦ ಕಿ.ಮೀ. ವ್ಯಾಪ್ತಿಯಲ್ಲಿ ೨ ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಆದೇಶ ಹೊರಡಿಸಿದ್ದಾರೆ.

ತಾ.೩ರಂದು ಶಾಂತಿನಿಕೇತನ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾದ ಗಣಪತಿ ಮೂರ್ತಿ ವಿಸರ್ಜನೆ ಹಿನ್ನೆಲೆ ತಾ.೩ರಂದು ಬೆಳಿಗ್ಗೆ ೬ ಗಂಟೆಯಿAದ ತಾ.೪ರ ಬೆಳಿಗ್ಗೆ ೬ ಗಂಟೆ ತನಕ ಹಾಗೂ ತಾ.೭ರಂದು ಅಶೋಕಪುರದ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ ಮೂರ್ತಿ ವಿಸರ್ಜನೋತ್ಸವ ಹಿನ್ನೆಲೆ ತಾ. ೭ರ ಬೆಳಿಗ್ಗೆ ೬ ಗಂಟೆಯಿAದ ತಾ.೮ರ ಬೆಳಿಗ್ಗೆ ೬ ಗಂಟೆಯವರೆಗೆ ಮಡಿಕೇರಿ ನಗರ ಸುತ್ತಮುತ್ತ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ರೆಸ್ಟೋರೆಂಟ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದಾರೆ.