ಸೋಮವಾರಪೇಟೆ, ಅ. ೧: ಸ್ಥಳೀಯ ರೋಟರಿ ಸಂಸ್ಥೆಯ ವತಿಯಿಂದ ರೋಟರಿ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ರೋಟರಿ ಸಂಸ್ಥೆ ಅಧ್ಯಕ್ಷ ನಂಗಾರು ವಸಂತ್ ಮಾತನಾಡಿ, ಬಲಿಷ್ಠ ರಾಷ್ಟç ನಿರ್ಮಾಣದಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಕಲ್ಲಿನ ಮೂರ್ತಿಗೆ ಶಿಕ್ಷಣದ ಮೂಲಕ ರೂಪ ನೀಡುವುದರೊಂದಿಗೆ ದೇಶದ ಒಬ್ಬ ಆದರ್ಶ ಪ್ರಜೆಯನ್ನಾಗಿ ಮಾಡುತ್ತಿದ್ದಾರೆ. ದೇಶದ ಎಲ್ಲ ಉದ್ಯೋಗಗಳಲ್ಲಿ ಶಿಕ್ಷಕರ ಕೆಲಸ ಪ್ರಮುಖ ಸ್ಥಾನದಲ್ಲಿದ್ದು, ಅವರನ್ನು ಗೌರವಿಸುವ ಕೆಲಸ ನಮ್ಮಿಂದಾಗಬೇಕೆAದರು.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಪಿ. ಚಂದ್ರಕಲಾ ಸನ್ಮಾನ ಸ್ವೀಕರಿಸಿ ಮಾತನಾಡಿ, ಸನ್ಮಾನ ಮಾಡಿಸಿಕೊಳ್ಳುವುದರಿಂದ ನಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ. ನಮ್ಮ ಸೇವಾವಧಿಯಲ್ಲಿ ಶಿಕ್ಷಣದಲ್ಲಿ ಅತ್ಯಂತ ಹಿಂದುಳಿದ ವಿದ್ಯಾರ್ಥಿಗಳನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದಲ್ಲಿ ನಮಗೆ ಹೆಚ್ಚಿನ ತೃಪ್ತಿ ಸಿಗುತ್ತದೆ ಎಂದರು.

ಮಕ್ಕಳಿಗೆ ಶಿಕ್ಷಣ ನೀಡುವುದು ಕೇವಲ ಶಿಕ್ಷಕರ ಕೆಲಸವಲ್ಲ. ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಸೇರಿಸಿದ ನಂತರ ಅವರ ಯೋಗಕ್ಷೇಮ ವಿಚಾರಿಸಲು ಮುಂದಾಗುವುದಿಲ್ಲ. ಕೇವಲ ಟಿವಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಮುಳುಗುವುದರಿಂದ ಮಕ್ಕಳು ವಿದ್ಯೆಯಲ್ಲಿ ಹಿಂದೆ ಉಳಿಯುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಯದರ್ಶಿ ಚೇತನ್, ಸ್ಥಾಪಕ ಅಧ್ಯಕ್ಷ ಹೆಚ್.ಸಿ. ನಾಗೇಶ್, ಮಾಜಿ ವಲಯ ಉಪಾಧ್ಯಕ್ಷ ಪಿ.ಕೆ. ರವಿ ಇದ್ದರು. ಇದೇ ಸಂದರ್ಭ ಜಿಲ್ಲೆ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಬಿ.ಟಿ. ಪೂರ್ಣೇಶ್, ತೋಳೂರುಶೆಟ್ಟಳ್ಳಿ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕ ಶಬರಿ ಗಿರೀಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಪಿ. ಚಂದ್ರಕಲಾ, ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಶಾಲೆಯ ಮುಖ್ಯ ಶಿಕ್ಷಕಿ ಉಷಾಕುಮಾರಿ ಅವರುಗಳಿಗೆ ನೇಷನ್ ಬಿಲ್ಡ್ ಅವಾರ್ಡ್ ನೀಡಿ ಗೌರವಿಸಲಾಯಿತು.