ಮಡಿಕೇರಿ, ಅ. ೨: ಹೆಬ್ಬಾಲೆ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಗೌರಿ ಗಣೇಶ ಹಬ್ಬದಂದು ಪ್ರತಿಷ್ಠಾಪನೆ ಮಾಡಿದ್ದ ಗೌರಿ ಗಣಪತಿ ವಿಸರ್ಜನಾ ಮಹೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ವೈಭವದಿಂದ ಶನಿವಾರ ತಡರಾತ್ರಿ ನಡೆಯಿತು.
ಗೌರಿ ಗಣಪತಿ ದೇವರಿಗೆ ವಿಶೇಷ ಪೂಜೆಯೊಂದಿಗೆ ಗೌರಿ ಗಣೇಶ ವಿಗ್ರಹವನ್ನು ರಥ ಮಂಟಪದಲ್ಲಿ ಪ್ರತಿಷ್ಠಾಪಿಸಿ ಊರಿನ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಕಾವೇರಿ ನದಿಯಲ್ಲಿ ಗೌರಿ ಗಣಪತಿಯನ್ನು ವಿಸರ್ಜಿಸಲಾಯಿತು. ಗ್ರಾಮ ದೇವತಾ ಸಮಿತಿ ಸದಸ್ಯರು, ಸುತ್ತಮುತ್ತಲ ಗ್ರಾಮಸ್ಥರು ಉತ್ಸವದಲ್ಲಿ ಭಾಗವಹಿಸಿದ್ದರು.