ಮಡಿಕೇರಿ, ಅ. ೨ : ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗಳ ಒಳಪಡುವ ಕೊಡಗು, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮತ್ತು ದಾವಣಗೆರೆ ಜಿಲ್ಲೆಯ (ಹೊನ್ನಾಳಿ, ನ್ಯಾಮತಿ ಮತ್ತು ಚೆನ್ನಗಿರಿ ತಾಲೂಕುಗಳಲ್ಲಿ) ಜಿಲ್ಲಾಧಿಕಾರಿಗಳನ್ನು ಆಯುಕ್ತರು ಮಂಗಳೂರು ಶಿವಮೊಗ್ಗ ಮಹಾನಗರ ಪಾಲಿಕೆ ಮೈಸೂರು ವಿಭಾಗ ಹಾಗೂ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಆಯಾಯ ಉಪ ವಿಭಾಗಕ್ಕೆ ಸಂಬAಧಪಟ್ಟ ಎಲ್ಲಾ ಉಪ ವಿಭಾಗ ಅಧಿಕಾರಿಗಳು ವಿಭಾಗದ ಎಲ್ಲಾ ಸಂಬAಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ.

ಅರ್ಹತಾ ದಿನಾಂಕ ೧-೧೧-೨೦೨೩ ಕ್ಕೆ ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಭಾರತ ಚುನಾವಣಾ ಆಯೋಗವು ಆಗಸ್ಟ್ ೯ ರ ಪತ್ರದನ್ವಯ ಕರ್ನಾಟಕ ನೈರುತ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ ಈ ಇಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ ೧೯ ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ ಎಂದು ನಿರ್ದೇಶನ ನೀಡಿರುತ್ತಾರೆ.

ಅರ್ಜಿ ನಮೂನೆ ೧೯ ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ಮತ್ತು ದಿನ ನವೆಂಬರ್ ೬, ಕರಡು ಮತದಾರ ಪಟ್ಟಿ ಪ್ರಕಟಣೆ ಅಕ್ಟೋಬರ್ ೨೩ ಗುರುವಾರ ಆಗಿರುತ್ತದೆ. ಅಕ್ಟೋಬರ್ ೨೩ ರಿಂದ ಡಿಸೆಂಬರ್ ೯ ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ದಿನಾಂಕವನ್ನು ನಿಗಧಿ ಮಾಡಲಾಗಿರುತ್ತದೆ. ಡಿಸೆಂಬರ್ ೩೦ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಯಾಗುತ್ತದೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಈ ಮಾರ್ಗಸೂಚಿ ಅನುಸರಿಸಬೇಕಿದೆ.

ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು ೧ ನೇ ನವೆಂಬರ್ ೨೦೨೩ ಕ್ಕೆ ಮೊದಲು ಆರು ವರ್ಷದ ಅವಧಿಯಲ್ಲಿ ಕನಿಷ್ಟ ಒಟ್ಟು ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲಾಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.

ಯಾವುದೇ ವ್ಯಕ್ತಿಯು ನಮೂನೆ ೧೯ ರಲ್ಲಿ ಅರ್ಜಿಯನ್ನು ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರರನ್ನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣಪತ್ರವನ್ನು ಲಗತ್ತಿಸಿ ಸಲ್ಲಿಸತಕ್ಕದ್ದು. (ಪ್ರಮಾಣ ಪತ್ರದ ಮಾದರಿ ಮತ್ತು ನಮೂನೆ ೧೯ನ್ನು ಮೇಲೆ ತಿಳಿಸಲಾದ ಕಚೇರಿಗಳಲ್ಲಿ ಪಡೆಯಬಹುದಾಗಿದೆ).

ಅರ್ಜಿಯನ್ನು ಸಲ್ಲಿಸುವ ದಿನಾಂಕದAದು ಯಾವುದೇ ವ್ಯಕ್ತಿಯು ಬೋಧನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ ಪ್ರಮಾಣ ಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿರತಕ್ಕದ್ದು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾರೆಯಾಗಿ ಕಳಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ ೧೯ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬAಧಿಸಿದAತೆ ಮೂಲ ಪ್ರಮಾಣ ಪತ್ರ ಒದಗಿಸಬೇಕು.

ಅರ್ಜಿಯಲ್ಲಿ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವAತಹ ಅಥವಾ ಸತ್ಯವೆಂದು ನಂಬಲಾಗದಿರುವAತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾ ಪ್ರಾತಿನಿಧ್ಯ ಅಧಿನಿಯಮ ೧೯೫೦ರ ೩೧ ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು. ನಮೂನೆ ೧೯ ರಲ್ಲಿ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ ನಿಯೋಜಿತ ಅಧಿಕಾರಿಗಳವರ ಕಚೇರಿ ಯಿಂದ ಪಡೆಯಬಹುದು. ಕೈಬರಹದ ಬೆರಳಚ್ಚು ಮಾಡಿದ ಅಥವಾ ಖಾಸಗಿ ಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು. ನಮೂನೆ ೧೯ರ ಅರ್ಜಿಗಳನ್ನು ಬಲ್ಕ (ಒಟ್ಟಿಗೆ) ಅರ್ಜಿ ಸ್ವೀಕರಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.