ಮಡಿಕೇರಿ, ಅ. ೩ : ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ತಾ. ೪ ರಂದು ಬೆಳಿಗ್ಗೆ ೧೦.೩೦ ರಿಂದ ೧೧.೩೦ ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕೊಡಗು ಮತ್ತು ಚಾಮರಾಜನಗರ ವೃತ್ತದ ಅಧೀಕ್ಷಕರು ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ೧೨.೩೦ ಗಂಟೆಯಿAದ ೦೧.೩೦ ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ಹಾಗೆಯೇ ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಸಂಜೆ ೪ ಗಂಟೆಯಿAದ ೫ ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಸೋಮವಾರಪೇಟೆ, ಕುಶಾಲ ನಗರ ಮತ್ತು ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸ ಲಾಗುತ್ತದೆ. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.