ಪೊನ್ನಂಪೇಟೆ, ಅ. ೪: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಪ್ರತಿ ವರ್ಷ ಜನಾಂಗದ ಸಾಧಕರನ್ನು ಗುರುತಿಸಿ ಗೌರವಿಸುವಂತೆ ಸಂಸ್ಥೆಯ ವತಿಯಿಂದ ವೀರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-೨೦೨೩ ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಕೊಡವ ಮುಸ್ಲಿಂ ಸಮುದಾಯದ ಪ್ರಥಮ ನ್ಯಾಯಾಧೀಶರಾದ ಆಲೀರ ಎಸ್. ಸಲ್ಮಾ ಅವರನ್ನು ಸಂಸ್ಥೆಯ ಪರವಾಗಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಅಲ್ಲದೆ ಸಮಾಜ ಸೇವೆಯಲ್ಲಿ ಕಳೆದ ೨೪ ವರ್ಷಗಳಿಂದ ಗ್ರಾ. ಪಂ. ಚುನಾಯಿತ ಪ್ರತಿನಿಧಿಯಾಗಿ, ಇದೀಗ ೨ನೇ ಬಾರಿಗೆ ಹೊದ್ದೂರು ಗ್ರಾ. ಪಂ. ಅಧ್ಯಕ್ಷರಾಗಿರುವ ಕೊಟ್ಟಮುಡಿಯ ಹೆಚ್.ಎ ಹಂಸ ಮತ್ತು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಕಷ್ಟು ಅತ್ಯುತ್ತಮ ರೈತ ಪ್ರಶಸ್ತಿ ಪಡೆದಿರುವ ಚಾಮಿಯಾಲ ಗ್ರಾಮದ ಕೂವಲೆರ ಹೆಚ್. ಹನೀಫ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ೨೦೨೩ನೇ ಸಾಲಿನಲ್ಲಿ ಎಂಬಿಎ ಪದವೀಧರರಾಗಿರುವ ಹಳ್ಳಿಗಟ್ಟು ಗ್ರಾಮದ ಚಿಮಿಚ್ಚಿರ ಕೆ.ಇಬ್ರಾಹಿಂ ಮತ್ತು ಸಿ.ಐ. ನಶತ್ ಅವರನ್ನೂ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ, ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ನಲ್ಲಿ ಸಿವಿಲ್ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ಜುಡಿಶಿಯಲ್ ಮ್ಯಾಜಿಸ್ಟೆçÃಟ್ ಆಗಿರುವ ಆಲೀರ ಸಲ್ಮಾ, ಶಿಕ್ಷಣ ಎಂಬುದು ಮನುಷ್ಯನ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಮಹಿಳೆಯರು ಉನ್ನತ ಶಿಕ್ಷಣದತ್ತ ಗಮನಹರಿಸಬೇಕಿದೆ ಎಂದರು.
ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವೀರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕÀ ಪ್ರೊ. ತಂಬAಡ ವಿಜಯ್ ಪೂಣಚ್ಚ, ಕೆ.ಎಂ.ಎ. ಸ್ಥಾಪಕ ಅಧ್ಯಕ್ಷ ಕುವೆಂಡ ವೈ. ಹಂಝತುಲ್ಲಾ, ದುಬೈನ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಪ್ರಮುಖ ಹರಿಶ್ಚಂದ್ರ ಎ.ಅಬೂಬಕ್ಕರ್ ಹಾಜಿ, ಕೆ. ಎಂ. ಎ. ಹಿರಿಯ ಉಪಾಧ್ಯಕ್ಷ ಡಾ. ಜೋಯಿಪೇರ ಎ. ಕುಂಜ್ಹಬ್ದುಲ್ಲಾ, ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ನಿರ್ದೇಶಕ ಚಿಮ್ಮಿಚ್ಚಿರ ಕೆ. ಇಬ್ರಾಹಿಂ (ಉಮ್ಮಣಿ) ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.