ಸೋಮವಾರಪೇಟೆ, ಅ. ೪: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಘಟಕ ಹಾಗೂ ಯುವ ಘಟಕದ ಸಹಯೋಗದೊಂದಿಗೆ ಹಾನಗಲ್ ಶ್ರೀ ಕುಮಾರಸ್ವಾಮಿಗಳ ೧೫೬ನೇ ಜಯಂತಿ ಹಾಗೂ ಶ್ರೀ ಡಾ.ಶಿವಕುಮಾರ ಸ್ವಾಮಿ ಜಯಂತಿ ಕಾರ್ಯಕ್ರಮದ ಅಂಗವಾಗಿ ಶ್ರೀ ದೊಡ್ಡವೀರ ರಾಜೇಂದ್ರ ಒಡೆಯರ್ ಕ್ರೀಡಾಕೂಟ ತಾ. ೭ ಮತ್ತು ೮ ರಂದು ಶನಿವಾರಸಂತೆ ಜಯದೇವ ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಘಟಕದ ಜಿಲ್ಲಾಧ್ಯಕ್ಷ ಮೋಕ್ಷಿಕ್‌ರಾಜ್ ಹೇಳಿದರು.

ತಾ. ೭ರಂದು ಬೆಳಿಗ್ಗೆ ೮ ಗಂಟೆಗೆ ಶನಿವಾರಸಂತೆ ಕೆಆರ್‌ಸಿ ವೃತ್ತದಿಂದ ಕ್ರೀಡಾಜ್ಯೋತಿಯನ್ನು ಗುಡುಗಳಲೇ ಜಾತ್ರಾ ಮೈದಾನಕ್ಕೆ ತರಲಾಗುವುದು. ಶನಿವಾರಸಂತೆ ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತÀ ಶಿವಲಿಂಗ ಸ್ವಾಮೀಜಿ ಅವರು ಕ್ರೀಡಾಜ್ಯೋತಿ ಬೆಳಗಲಿದ್ದಾರೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕ ಬಿ.ವೈ. ವಿಜೇಂದ್ರ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಶೈವ ಲಿಂಗಾಯುತ ಮಹಾಸಭಾದ ರಾಷ್ಟಿçÃಯ ಉಪಾಧ್ಯಕ್ಷ ಸಚ್ಚಿದಾನಂದಮೂರ್ತಿ, ಯುವ ಘಟಕದ ರಾಜ್ಯಾಧ್ಯಕ್ಷ ಜಿ. ಮನೋಹರ ಅಬ್ಬಿಗೆರೆ, ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ ಭಾಗವಹಿಸಲಿದ್ದಾರೆ.

ಟೆನಿಸ್ ಬಾಲ್ ಕ್ರಿಕೇಟ್ ಪಂದ್ಯಾಟ, ಪುರುಷರು ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟಗಳು ನಡೆಯಲಿವೆ. ಕಾಲೇಜು ವಿದ್ಯಾರ್ಥಿಗಳಿಗೆ ೧೦೦ಮೀ. ಓಟ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಸ್ಪರ್ಧೆಗಳು, ನಿಧಾನ ಬೈಕ್ ಚಾಲನೆ, ಭಾರದ ಗುಂಡು ಎಸೆತ, ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯರಿಗೂ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಯುವ ಘಟಕದ ತಾಲೂಕು ಅಧ್ಯಕ್ಷ ಕೆ.ಪಿ. ಆದರ್ಶ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ. ನಿತನ್, ಸದಸ್ಯರಾದ ಸಿ.ಎಲ್. ಭರತ್, ಸಿ.ಎಂ. ಸೋಹನ್ ಇದ್ದರು.