ಮಡಿಕೇರಿ, ಅ. ೪: ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್(ಸಿ.ಪಿ.ಎ)ನ ೧೪೪ನೇ ವರ್ಷದ ವಾರ್ಷಿಕ ಮಹಾಸಭೆ ತಾ. ೧೦ ರಂದು ಮಡಿಕೇರಿಯ ಹೊಟೇಲ್ ಕ್ರಿಸ್ಟಲ್ ಕೋರ್ಟ್ನಲ್ಲಿ ಜರುಗಲಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಯುನೈಟೆಡ್ ಪ್ಲಾಂಟರ್ಸ್ ಅಸೋಸಿಯೇಷನ್ ಆಫ್ ಸೌತ್ ಇಂಡಿಯಾದ ಅಧ್ಯಕ್ಷ ಶ್ರೀಧರನ್ ಸಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮಹೇಶ್ ಶಶಿಧರ್ ಅವರು ಭಾಗವಹಿಸಲಿದ್ದಾರೆ.