ಸಿದ್ದಾಪುರ, ಅ. ೩: ಪಟ್ಟಣದಲ್ಲಿ ಬೀದಿ ನಾಯಿಯೊಂದು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಐದಾರು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಸಿದ್ದಾಪುರ ಪಟ್ಟಣ ವ್ಯಾಪ್ತಿಯ ವೀರಾಜಪೇಟೆ ರಸ್ತೆಯಲ್ಲಿ ಹಾಗೂ ಪ್ರಮುಖ ಬೀದಿಗಳಲ್ಲಿ ಬೀದಿನಾಯಿಯೊಂದು ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಮಕ್ಕಳ ಹಾಗೂ ಸಾರ್ವಜನಿಕರ ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡ ರಮ್ಲ, ಮೇಘನ, ಮರ್ಜಲ್, ಗಣೇಶ್, ಸುಂದರ್, ಸೈಫುದ್ದೀನ್ ಅವರುಗಳು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿದ್ದಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಪಂಚಾಯಿತಿಗೆ ದೂರು ನೀಡಿದ್ದಾರೆ.

(ಮೊದಲ ಪುಟದಿಂದ) ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರೇಮ ಗೋಪಾಲ್ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳ ಬಳಿ ಅನುಮತಿ ಕೇಳಿದ್ದು, ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಹಾಗೂ ಕ್ರಮಕೈಗೊಳ್ಳಲು ಪತ್ರ ಕಳಿಸಲಾಗಿದೆ. ಅಧಿಕಾರಿಗಳ ಅನುಮತಿ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ಅಧ್ಯಕ್ಷರು ತಿಳಿಸಿದ್ದಾರೆ. ಬೀದಿ ನಾಯಿಯ ಹಾವಳಿಯಿಂದಾಗಿ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಭಯದ ವಾತಾವರಣ ನಿರ್ಮಾಣವಾಗಿದೆ.ಬೀದಿ ನಾಯಿ ದಾಳಿ - ಏಳು ಮಂದಿಗೆ ಗಾಯ