ಸುಂಟಿಕೊಪ್ಪ, ಅ. ೪: ಮಲಯಾಳಿ ಸಮಾಜ ಬಾಂಧವರ ಸಂಪ್ರದಾಯ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಕರು ಮಂದೆ ಬರಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಹೇಳಿದರು.
ಸುಂಟಿಕೊಪ್ಪ ಮಲಯಾಳಿ ಸಮಾಜದ ೧೬ನೇ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಲಾದ ಓಣಂ ಹಬ್ಬದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಲೆಯಾಳಿಗಳು ದೇಶದ ವಿವಿಧೆಡೆಯಲ್ಲಿ ವಿದೇಶದಲ್ಲೂ ನೆಲೆಸಿ ತಮ್ಮ ಆಚಾರ ವಿಚಾರ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುತ್ತಿರುವುದು ಶ್ಲಾಘನೀಯವಾದುದು. ಘೋಷಕರು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಲು ಮುಂದಾಗಬೇಕು ಮಲಯಾಳಿ ಸಮಾಜದಲ್ಲಿ ಬಡವರು, ಅವಿದ್ಯಾವಂತರೂ ಇನ್ನೂ ಇದ್ದಾರೆ. ಇವರುಗಳನ್ನು ಮುಖ್ಯ ವಾಹಿನಿಗೆ ಸಂಘಟಕರು ತರಬೇಕು. ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಶಕ್ತರಾಗಬೇಕೆಂದು ಕರೆ ನೀಡಿದರು.
ಪ್ರಾಸ್ತಾವಿಕ ನುಡಿಯಾಡಿದ ಸುಂಟಿಕೊಪ್ಪ ಮಲಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಪಿ.ಆರ್. ಸುಕುಮಾರ್ ೧೬ ವರ್ಷದ ಹಿಂದೆ ಸ್ಥಾಪಿಸಲಾದ ಸಮಾಜ ಈಗ ಪ್ರವರ್ಧಮಾನಕ್ಕೆ ಬರುತ್ತಿದೆ. ಕೊಡಗಿನಲ್ಲಿ ಪ್ರಥಮವಾಗಿ ಸ್ಥಾಪಿಸಿದ ಮಲಯಾಳಿ ಸಮಾಜ ಎಂಬ ಹೆಗ್ಗಳಿಕೆಗೆ ನಾವು ಪಾತ್ರರಾಗಿದ್ದೇವೆ. ಸಂಘಟನೆಯಿAದ ಸರಕಾರದ ಸೌಲಭ್ಯ ಪಡೆದುಕೊಳ್ಳವಂತಾಗಬೇಕು, ರಾಜಕೀಯವಾಗಿ ಮುಂದೆ ಬರಬೇಕು ಮರಣ ನಿಧಿ ಸ್ಥಾಪಿಸಿ ಸಮಾಜ ಬಾಂಧವರ ಸಂಕಷ್ಟಕ್ಕೆ ನೆರವಾಗಬೇಕೆಂದು ಹೇಳಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಅಪ್ಪಟ ಮನುಷ್ಯ ಪ್ರೀತಿಯ ಸಾಕಾರ ಮೂರ್ತಿಯಾಗಿದ್ದ ಶ್ರೀ ನಾರಾಯಣ ಗುರುಗಳ ಅನುಯಾಯಿಯಾದ ಮಲೆಯಾಳಿಗಳು ಪ್ರಪಂಚದ ಎಲ್ಲೆಡೆ ಪ್ರವರ್ಧಮಾನಕ್ಕೆ ಬರುತ್ತಿದೆ. ಕೊಡಗಿನಲ್ಲಿ ಪ್ರಥಮವಾಗಿ ಸ್ಥಾಪಿಸಿದ ಮಲಯಾಳಿ ಸಮಾಜ ಎಂಬ ಹೆಗ್ಗಳಿಕೆಗೆ ನಾವು ಪಾತ್ರರಾಗಿದ್ದೇವೆ. ಸಂಘಟನೆಯಿAದ ಸರಕಾರದ ಸೌಲಭ್ಯ ಪಡೆದುಕೊಳ್ಳವಂತಾಗಬೇಕು, ರಾಜಕೀಯವಾಗಿ ಮುಂದೆ ಬರಬೇಕು ಮರಣ ನಿಧಿ ಸ್ಥಾಪಿಸಿ ಸಮಾಜ ಬಾಂಧವರ ಸಂಕಷ್ಟಕ್ಕೆ ನೆರವಾಗಬೇಕೆಂದು ಹೇಳಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಅಪ್ಪಟ ಮನುಷ್ಯ ಪ್ರೀತಿಯ ಸಾಕಾರ ಮೂರ್ತಿಯಾಗಿದ್ದ ಶ್ರೀ ನಾರಾಯಣ ಗುರುಗಳ ಅನುಯಾಯಿಯಾದ ಮಲೆಯಾಳಿಗಳು ಪ್ರಪಂಚದ ಎಲ್ಲೆಡೆ ಸಾಂಪ್ರದಾಯಿಕವಾಗಿ ಆಚರಿಸಲು ಹಿರಿಯರು ಮಕ್ಕಳಿಗೆ ತಿಳಿ ಹೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಆಚಾರ ಸಂಪ್ರದಾಯ ಸಂಸ್ಕೃತಿ ನಶಿಸಿ ಹೋಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್ ಓಣಂ ಹಬ್ಬ ಜಾತಿ ಮತ ಧರ್ಮ ಭೇದವಿಲ್ಲದೆ ಕೇರಳದಲ್ಲಿ ಎಲ್ಲರೂ ಆಚರಿಸುತ್ತಾರೆ. ಸೌಹಾರ್ದತೆಯ ಸಂಕೇತವಾಗಿ ಕೊಡಗಿನಲ್ಲೂ ಮಲೆಯಾಳಿಗಳ ಸಂಘಟನಾತ್ಮಕವಾಗಿ ಓಣಂ ಹಬ್ಬ ಆಚರಿಸಲಾಗುತ್ತಿದೆ ಎಂದರು. ಸುಂಟಿಕೊಪ್ಪ ಮಲಯಾಳಿ ಸಮಾಜದ ಮರಣ ನಿಧಿಗೆ ಪಿ.ಎಂ. ಲತೀಫ್ ಹಾಗೂ ಅನೂಪ್ ಕುಮಾರ್ ತಲಾ ೨೫,೦೦೦ ರೂಗಳ ದೇಣಿಗೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.
ಮಹಿಳೆಯರು ಪುರುಷರು ಕೇರಳದ ಚಂಡೆ ವಾದ್ಯದೊಂದಿಗೆ ಬಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಅಲಂಕೃತ ರಥದಲ್ಲಿ ಕುಳ್ಳಿರಿಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ೨೦೨೩ನೇ ಸಾಲಿನಲ್ಲಿ ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ನೀಡಿ ಸನ್ಮಾನಿಸಲಾಯಿತು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಅವರನ್ನು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಮೊನಿಕಾ ಸ್ವಾಗತ ಭರತನಾಟ್ಯ ನೃತ್ಯ ಪ್ರದರ್ಶಿಸಿದರು. ಕೆ.ಎಸ್. ಅನಿಲ್ ಹಾಗೂ ಶಿವಮಣಿ ಕಾರ್ಯಕ್ರಮ ನಿರೂಪಿಸಿದರು.