ಕುಶಾಲನಗರ, ಅ. ೩ : ಸಮಾಜ ಪರಿವರ್ತನೆ, ಆರ್ಥಿಕ ಪುನಶ್ಚೇತನ ಹಾಗೂ ಜಾತಿ ಮುಕ್ತ ಸಮಾಜ ನಿರ್ಮಾಣ ಬಾಬಾ ಸಾಹೇಬ್ ಡಾ.ಬಿ. ಆರ್. ಅಂಬೇಡ್ಕರ್ ಅವರ ಕನಸಾಗಿತ್ತು ಎಂದು ಅಂಬೇಡ್ಕರ್ ವಿಚಾರವಾದಿ ಬಿ. ಗೋಪಾಲ್ ಅವರು ಪ್ರತಿಪಾದಿಸಿದ್ದಾರೆ.
ಅವರು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಮತ್ತು ತಾಲೂಕು ಘಟಕದಿಂದ ಕುಶಾಲನಗರದಲ್ಲಿ ನಡೆದ ಡಾ. ಅಂಬೇಡ್ಕರ್ ಅವರ ೧೩೨ ನೇ ಜನ್ಮ ಜಯಂತಿ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಯಾವುದೇ ಜಾತಿಗೆ ಅನ್ಯಾಯ ವಾಗದಂತೆ ಸಂವಿಧಾನ ರಚಿಸಲಾಗಿದೆ. ಸಂವಿಧಾನ ರಕ್ಷಣೆ ಮಾಡುವ ನಿಟ್ಟಿನಲ್ಲಿ ಜಾತಿಗಳು ಒಂದಾಗಬೇಕಾಗಿದೆ. ಪ್ರತಿಯೊಬ್ಬರು ಕೊಡುವವ ರಾಗಬೇಕಾಗಿದೆ. ಅಂಬೇಡ್ಕರ್ ಅವರ ಅಭಿಮಾನಿಗಳಾಗುವ ಬದಲು ಅವರ ಅನುಯಾಯಿಗಳಾಗಿ ಎಂದು ಕರೆ ನೀಡಿದರು. ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಅವರು ನಿವೃತ್ತ ನೌಕರರಿಗೆ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನಿಸಿ ಗೌರವಿಸಿದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ನಳಂದ ಬೌದ್ಧ ವಿಶ್ವ ವಿದ್ಯಾಲಯದ ಶ್ರೀಗಳಾದ ಬಂತೇಜ ಬೋಧಿ ದತ್ತ ತೇರಾ ಅವರು ಪಂಚಶೀಲ ತತ್ವಗಳನ್ನು ಬೋಧಿಸಿದರು.
ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಾಮಾನ್ಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ಮಾತನಾಡಿ, ಸಮನ್ವಯ ಸಮಿತಿಯ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು.
ಸಮನ್ವಯ ಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಎಂ.ಎಸ್. ಮಹೇಂದ್ರ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ನಂದಕುಮಾರ್ ಉಪಸ್ಥಿತರಿದ್ದು ಮಾತನಾಡಿದರು.
ಸಮನ್ವಯ ಸಮಿತಿಯ ಆರ್. ಮೋಹನ್, ಡಾ. ಎಸ್. ವಿಜಯ್ ಕುಮಾರ್, ಕೆಂಪ ಸಿದ್ದಯ್ಯ ಮತ್ತು ಸಮನ್ವಯ ಸಮಿತಿಯ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಇದ್ದರು.