ಕೂಡಿಗೆ, ಅ. ೩ : ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿಯ ಕಾರ್ಯಗಳಿಗೆ ಹಿನ್ನಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಬAಧಿಸಿದ ಅಧಿಕಾರಿ ವರ್ಗದವರು ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ. ಎಲ್. ವಿಶ್ವ ಸೇರಿದಂತೆ ಸರ್ವ ಸದಸ್ಯರು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯತಿಗಳಲ್ಲಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆ ೧೫ ನೇ ಹಣಕಾಸು ಯೋಜನೆ ಸೇರಿದಂತೆ ವಿವಿಧ ಗ್ರಾಮೀಣ ಮಟ್ಟದ ಯೋಜನೆಗಳ ನೋಂದಣಿಯು ಈಗಿನ ನಿಯಮಗಳಂತೆ ಕಂಪ್ಯೂಟರಿಕರಣ ದ ಮೂಲಕ ನಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಹೊಸ ಕಾರ್ಯದರ್ಶಿ ಈ ಕಾರ್ಯವನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಅದರಿಂದಾಗಿ ಸಂಬAಧಿಸಿದ ತಾಲೂಕು ಪಂಚಾಯಿತಿ ಅಧಿಕಾರಿ ವರ್ಗದವರು ಪಿಡಿಓ ನೇಮಕ ಮಾಡುವಂತೆ ಅಧ್ಯಕ್ಷ ಸಿ.ಎಲ್. ವಿಶ್ವ ಅವರು ಒತ್ತಾಯಿಸಿದ್ದಾರೆ.