ಗೋಣಿಕೊಪ್ಪಲು, ಅ. ೩: ಇಲ್ಲಿಯ ತನಕ ನಡೆದ ಗೌರಿ ಗಣೇಶ ಉತ್ಸವವು ಅತ್ಯಂತ ಯಶಸ್ವಿಯಾಗಿ ಜರುಗಿದೆ. ಜಿಲ್ಲೆಯ ಪೊಲೀಸರು ಶಾಂತಿ ಸೌಹಾರ್ದತೆ ಕಾಪಾಡಲು ಹಗಲು-ರಾತ್ರಿ ಎನ್ನದೆ ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಪೊಲೀಸರ ಕಾರ್ಯ ಪ್ರಸಂಶನಿಯ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಇತಿಹಾಸ ಪ್ರಸಿದ್ಧ ಅಮ್ಮತ್ತಿಯ ಗೋಣಿಕೊಪ್ಪಲು, ಅ. ೩: ಇಲ್ಲಿಯ ತನಕ ನಡೆದ ಗೌರಿ ಗಣೇಶ ಉತ್ಸವವು ಅತ್ಯಂತ ಯಶಸ್ವಿಯಾಗಿ ಜರುಗಿದೆ. ಜಿಲ್ಲೆಯ ಪೊಲೀಸರು ಶಾಂತಿ ಸೌಹಾರ್ದತೆ ಕಾಪಾಡಲು ಹಗಲು-ರಾತ್ರಿ ಎನ್ನದೆ ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಪೊಲೀಸರ ಕಾರ್ಯ ಪ್ರಸಂಶನಿಯ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಇತಿಹಾಸ ಪ್ರಸಿದ್ಧ ಅಮ್ಮತ್ತಿಯ ಬಾಳಬೇಕು. ಇದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ನೆಲೆಸಲಿದೆ. ಬಸವೇಶ್ವರ ದೇವಾಲಯ ಸಮಿತಿ ಕಳೆದ ೮೦ ವರ್ಷಗಳಿಂದ ಹಬ್ಬ ಆಚರಣೆ ಮಾಡುತ್ತ ಬಂದಿದೆ. ಆಡಳಿತ ಮಂಡಳಿಯ ಉತ್ತಮ ಕಾರ್ಯವನ್ನು ಶ್ಲಾಘಿಸಿದರು.
ಬಸವೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಮಾಚಿಮಂಡ ಮಧು ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಮಧೇನು ಗೋಶಾಲೆ ಮುಖ್ಯಸ್ಥ ರಾಮಚಂದ್ರ ಭಟ್ ಮಾತನಾಡಿ ಗಣಪತಿ ಉತ್ಸವದ ವಿವರಣೆಗಳನ್ನು ನೀಡಿದರು.
ಸಮಿತಿಯ ಉಪಾಧ್ಯಕ್ಷ ಪ್ರಿನ್ಸ್ ಗಣಪತಿ ಮಾತನಾಡಿ, ದೇವಾಲಯ ಸಮಿತಿ ವತಿಯಿಂದ ವರ್ಷಂಪ್ರತಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಗರದ ಹೃದಯ ಭಾಗದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರಿಂದ ಸಾಕಷ್ಟು ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಪಟ್ರಪಂಡ ಸೋಮೆಶ್, ಪಳೆಯಪಂಡ ಹರಿ, ಕಾನೂನು ಸಲಹೆಗಾರರಾದ ಬಿದ್ದಂಡ ಪ್ರಥಮ್, ಜಯ ಉತ್ತಪ್ಪ, ನಾಯಡ ಪವಿ, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ನಿರ್ದೇಶಕ ಕುಟ್ಟಂಡ ರವಿ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯ ಕ್ರಮವು ಜರುಗಿತು. ಮುಂಜಾನೆ ವೇಳೆ ಗೌರಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.