ಮಡಿಕೇರಿ, ಅ. ೪: ಹಿರಿಯರು ಕಾನೂನು ಹಾಗೂ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಸಲಹೆಯಿತ್ತರು.
ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು. ಬದಲಾಗುತ್ತಿರುವ ಜಗತ್ತಿನಲ್ಲಿ ಹಿರಿಯ ನಾಗರಿಕರ ಸ್ಥಿತಿಸ್ಥಾಪಕತ್ವ ಎಂಬ ಘೋಷ ವಾಕ್ಯದಡಿಯಲ್ಲಿ ಬದಲಾಗುತ್ತಿರುವ ಈ ಆಧುನಿಕ ಸನ್ನಿವೇಶದಲ್ಲಿ ತಂತ್ರಜ್ಞಾನವೂ ಒಂದಾಗಿದೆ. ಹಿರಿಯ ನಾಗರಿಕರು ಇದನ್ನು ಬಳಸಿ ಉಪಯುಕ್ತ ಮಾಹಿತಿ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಮಾತನಾಡಿ, ಹಿರಿಯ ನಾಗರಿಕರು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದರು.
ಜಿಲ್ಲಾ ಹಿರಿಯ ನ್ಯಾಯಾಧೀಶರು ಮಡಿಕೇರಿ, ಅ. ೪: ಹಿರಿಯರು ಕಾನೂನು ಹಾಗೂ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಸಲಹೆಯಿತ್ತರು.
ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು. ಬದಲಾಗುತ್ತಿರುವ ಜಗತ್ತಿನಲ್ಲಿ ಹಿರಿಯ ನಾಗರಿಕರ ಸ್ಥಿತಿಸ್ಥಾಪಕತ್ವ ಎಂಬ ಘೋಷ ವಾಕ್ಯದಡಿಯಲ್ಲಿ ಬದಲಾಗುತ್ತಿರುವ ಈ ಆಧುನಿಕ ಸನ್ನಿವೇಶದಲ್ಲಿ ತಂತ್ರಜ್ಞಾನವೂ ಒಂದಾಗಿದೆ. ಹಿರಿಯ ನಾಗರಿಕರು ಇದನ್ನು ಬಳಸಿ ಉಪಯುಕ್ತ ಮಾಹಿತಿ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಮಾತನಾಡಿ, ಹಿರಿಯ ನಾಗರಿಕರು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದರು.
ಜಿಲ್ಲಾ ಹಿರಿಯ ನ್ಯಾಯಾಧೀಶರು ಮನೆಯಿಂದ ಹೊರ ಹಾಕುವಂತಿಲ್ಲ. ಜೀವಿತಾವಧಿವರೆಗೆ ಮಕ್ಕಳು ತಂದೆ ತಾಯಿಯನ್ನು ನೋಡಿಕೊಳ್ಳಬೇಕು ಎಂದು ಹಿರಿಯ ನಾಗರಿಕರ ಕಾಯ್ದೆಯು ವಿವರಿಸುತ್ತದೆ. ಯಾವುದೇ ಸಮಸ್ಯೆ ಇದ್ದರೂ ಕಾನೂನಿನ ಮುಖಾಂತರ ಬಗೆಹರಿಸಲು ಪ್ರಯತ್ನಿಸಿ ಎಂದರು.
ಕಾರ್ಯಕ್ರಮದಲ್ಲಿ ರಾಣಿ ಮಾಚಯ್ಯ, ಮಾಚಮ್ಮ ಪೊನ್ನಪ್ಪ, ಪಾಲೆಕಂಡ ಬೋಪಯ್ಯ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತ ನೌಕರ ಸಂಘದ ಅಧ್ಯಕ್ಷ ಮಲ್ಲಪ್ಪ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ವಿಮಲಾ ಕೆ.ಜಿ, ವೀರಾಜಪೇಟೆಯ ಹಿರಿಯ ವಕೀಲ ಶಂಕರೀ ಪೊನ್ನಪ್ಪ ಮತ್ತಿತರರು ಪಾಲ್ಗೊಂಡಿದ್ದರು.