ಗೋಣಿಕೊಪ್ಪಲು, ಅ. ೪: ೧೦ ದಿನದೊಳಗೆ ಪೊನ್ನಂಪೇಟೆ ತಾಲೂ ಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು. ತಪ್ಪಿದಲ್ಲಿ ಪೊನ್ನಂಪೇಟೆ ತಾಲೂಕು ಬಂದ್‌ಗೆ ಕರೆ ನೀಡಲಾಗುವುದು ಎಂದು ಕರ್ನಾ ಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಕಾಡ್ಯಮಾಡ ಮನು ಸೋಮಯ್ಯ ಎಚ್ಚರಿಸಿದರು.

ಪೊನ್ನಂಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ರೈತ ಸಂಘದ ಸದಸ್ಯರಿಗಾಗಿ ಏರ್ಪಡಿಸಲಾಗಿದ್ದ ರೈತರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಮನು ಸೋಮಯ್ಯ ಪ್ರಸ್ತುತ ಕರ್ನಾಟಕ ಸರ್ಕಾರ ಅನೇಕ ತಾಲೂಕು ಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಆದರೆ ಘೋಷಣೆ ಪಟ್ಟಿಯಲ್ಲಿ ಪೊನ್ನಂಪೇಟೆ ತಾಲೂ ಕನ್ನು ಕೈಬಿಟ್ಟಿರುವುದು ಸರಿಯಲ್ಲ.

ಪೊನ್ನಂಪೇಟೆ ತಾಲೂಕಿನ ರೈತ ರಿಗೆ ಇದರಿಂದ ಅನ್ಯಾಯವಾಗಿದೆ. ಪೊನ್ನಂ ಪೇಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡು ವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇಲ್ಲಿಯ ತನಕ ಘೋಷಣೆ ಆಗಿಲ್ಲ. ಇದರಿಂದಾಗಿ ರೈತರು ಒಟ್ಟಾಗಿ ಸೇರಿ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಬೇಕು. ಜನಪ್ರತಿನಿಧಿ ಗಳು ಕೂಡ ಈ ಬಗ್ಗೆ ವಿಶೇಷ ಕ್ರಮ ವಹಿಸಬೇಕು. ಕ್ಷೇತ್ರದ ಶಾಸಕರೂ ಪೊನ್ನಂಪೇಟೆ ತಾಲೂಕಿನಲ್ಲಿ ವಾಸವಾಗಿದ್ದಾರೆ. ಆದರೂ ಪೊನ್ನಂ ಪೇಟೆ ತಾಲೂಕನ್ನು ಬರಪೀಡಿತ ಪ್ರದೇಶದಿಂದ ಕೈಬಿಡಲು ಕಾರಣ ನೀಡುವಂತೆ ಆಗ್ರಹಿಸಿದರು.

ಪೊನ್ನಂಪೇಟೆ ತಾಲೂಕಿನ ಬಾಳೆಲೆ, ಶ್ರೀಮಂಗಲ, ಹುದಿಕೇರಿ ಹಾಗೂ ಪೊನ್ನಂಪೇಟೆ ಹೋಬಳಿ ಯಲ್ಲಿ ವಾಡಿಕೆಯಂತೆ ಮಳೆಯಾಗ ಲಿಲ್ಲ. ಹೂಬಿಟ್ಟಿ ಕಾಫಿ ಗಿಡವು ನಂತರ ಕಾಯಿಗಳು ಒಣಗಿ ಫಸಲು ನಷ್ಟ ಗೊಂಡಿದೆ. ಇದರಿಂದಾಗಿ ಮುಂದಿನ ಫಸಲು ಶೇ.೫೦ರಷ್ಟು ಕಡಿಮೆಯಾ ಗಲಿದೆ. ಬಹಳಷ್ಟು ಭತ್ತದ ಭೂಮಿ ಯನ್ನು ಉಳುಮೆ ಮಾಡಿ ಬೀಜ ಬಿತ್ತಿ ನಾಟಿ ಕಾರ್ಯ ನಡೆಸಿದರು. ಸಕಾಲ ದಲ್ಲಿ ಮಳೆಯಾಗಲಿಲ್ಲ ಎಂದು ನೋವು ತೋಡಿಕೊಂಡರು.

ಎರಡು ಬಾರಿ ಬೀಜ ಬಿತ್ತನೆ ಮಾಡಿರುವ ರೈತರು ನಮ್ಮೊಂ ದಿಗಿದ್ದಾರೆ. ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಿ ರಾಜ್ಯದ ನೂರಾರು ತಾಲೂಕು ಕೇಂದ್ರ ಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಾಗ ಪೊನ್ನಂ ಪೇಟೆ ತಾಲೂಕು ಆ ಪಟ್ಟಿಯಿಂದ ಕಣ್ಮರೆಯಾಗಿರುವುದಕ್ಕೆ ಯಾರು ಹೊಣೆ ಎಂದು ರೈತ ಸಂಘದ ಪ್ರ. ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಕಾರ್ಯದರ್ಶಿ ಅಜ್ಜ ಮಾಡ ಚಂಗಪ್ಪ, ಸಂಚಾಲಕ ಪುಚ್ಚಿಮಾಡ ಸುಭಾಶ್, ತಾಲೂಕು ಅಧ್ಯಕ್ಷ ಆಲೆಮಾಡ ಮಂಜುನಾಥ್ ಸೇರಿದಂತೆ ಇನ್ನಿತರ ಪ್ರಮುಖರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ರೈತರ ಪ್ರಶ್ನೆಗಳಿಗೆ ಉತ್ತರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಪ್ರಯತ್ನಿಸಿದರಾದರೂ ಸಮರ್ಪಕ ಉತ್ತರ ಲಭ್ಯವಾಗದ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿ ಯಾಯಿತು. ಸಭೆಯಲ್ಲಿದ್ದ ಅರುವ ತ್ತೋಕ್ಲು ಕಾಫಿ ಮಂಡಳಿಯ ಹಿರಿಯ ಅಧಿಕಾರಿ ಡಾ.ಕೆ. ಶ್ರೀದೇವಿ ಮಾತ ನಾಡಿ ಬರಪೀಡಿತ ಘೋಷಣೆಯಲ್ಲಿ ಸರ್ಕಾರವೂ ನೀಡಿರುವ ಮಾನ ದಂಡಗಳನ್ನು ಅನುಸರಿಸಲಾಗಿದೆ. ಪೊನ್ನಂಪೇಟೆ ತಾಲೂಕು ಕೈ ಬಿಟ್ಟಿರುವುದು ಅಧಿಕಾರಿಗಳ ಗಮನಕ್ಕೆ ಈಗಾಗಲೇ ಬಂದಿದೆ. ಸಭೆಯಲ್ಲಿನ ನಿರ್ಣಯಗಳನ್ನು ಎಲ್ಲಾ ಅಧಿಕಾರಿಗಳು ಒಟ್ಟುಗೂಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ರೈತರ ಪರವಾಗಿ ಇಲಾಖೆಯು ಕೆಲಸ ನಿರ್ವಹಿಸಲಿದೆ ಎಂದು ಹೇಳಿದರು.

ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಮಾತನಾಡಿ ನಿಯಾಮಾನುಸಾರ ಇಲಾಖೆಯ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬರಪೀಡಿತ ಪ್ರದೇಶ ಘೋಷಣೆಯಲ್ಲಿ ಪೊನ್ನಂಪೇಟೆ ತಾಲೂಕು ಇಲ್ಲದಿ ರುವುದನ್ನು ಗಂಭೀರವಾಗಿ ಪರಿಗಣಿಸಿ ಈಗಾಗಲೇ ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ಇಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಸಭೆಯಲ್ಲಿನ ನಿರ್ಣಯ ವನ್ನು ಕೂಡ ಸರ್ಕಾರಕ್ಕೆ ಆದಷ್ಟು ಬೇಗನೇ ಕಳುಹಿಸಿಕೊಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಂತಿಮವಾಗಿ ರೈತರ ಸಲಹೆ ಯಂತೆ ಅಧಿಕಾರಿಗಳಿಗೆ ೧೦ ದಿನದ ಗಡುವು ನೀಡಲಾಯಿತು. ಪೊನ್ನಂಪೇಟೆ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆಯಾಗದಿದ್ದಲ್ಲಿ ಪೊನ್ನಂಪೇಟೆ ತಾಲೂಕನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ. ಇವುಗಳಿಗೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ಅಧಿಕಾರಿಗಳ ಸಮ್ಮುಖ ದಲ್ಲಿ ಕೈಗೊಂಡ ನಿರ್ಣಯಗಳನ್ನು ಪ್ರಕಟಿಸಿದರು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಾದ ಕಾಫಿ ಮಂಡಳಿಯ ವಿ.ಶ್ರೀರಮಣ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕಿ ಎಂ.ಕೆ.ದೀನಾ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಎನ್.ಜೆ.ರೀನಾ, ಪಿ.ಶಿವಮೂರ್ತಿ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಪಿ.ಕೆ. ಸುಧೀಂದ್ರ, ಹೆಚ್.ಬಿ. ರವಿಚಂದ್ರಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಚೊಟ್ಟೆ ಕಾಳಪಂಡ ಮನು, ಆಶಾ ಪ್ರಕಾಶ್, ತಾಣಚ್ಚೀರ ಲೆಹರ್ ಬಿದ್ದಪ್ಪ, ಬಾಚಮಾಡ ಭವಿ ಕುಮಾರ್, ತೀತರಮಾಡ ರಾಜ, ಪುಚ್ಚಿಮಾಡ ರಾಯ್ ಮಾದಪ್ಪ, ಸಂತೋಷ್, ಮಿದೇರಿರ ಕವಿತರಾಮು,ಶಿಲ್ಪ, ಚೆಪ್ಪುಡೀರ ಕಾರ್ಯಪ್ಪ, ಸೇರಿದಂತೆ ಮುಂತಾದವರು ಹಾಜರಿದ್ದರು.

-ಹೆಚ್.ಕೆ.ಜಗದೀಶ್