ಗೋಣಿಕೊಪ್ಪಲು, ಅ. ೪: ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಗೆ ಶಾಸಕ ಎ.ಎಸ್. ಪೊನ್ನಣ್ಣ ಮೊದಲ ಬಾರಿಗೆ ಭೇಟಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮಸ್ಥರು ನೂತನ ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಗ್ರಾಮ ಪಂಚಾಯಿತಿ ಆವರಣದ ಉದ್ಯಾನವನ ಹಾಗೂ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದರು.
ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕೊಲ್ಲಿರ ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಶಾಸಕ ಪೊನ್ನಣ್ಣ ಗ್ರಾಮಸ್ಥರ ಹಲವು ಸಮಸ್ಯೆಗಳಿಗೆ ಪರಿಹಾರ ಕೂಡಲೇ ನೀಡುವಂತೆ ನಿರ್ದೇಶನ ನೀಡಿದರು.
ಗ್ರಾಮದ ಹಿರಿಯರಾದ ಉಮೇಶ್ ಕೇಚಮಯ್ಯ ಮಾತನಾಡಿ ಹಲವು ವರ್ಷಗಳಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಿಂದ ನಾಗರಿಕರು ತೊಂದರೆ ಅನುಭವಿಸು ತ್ತಿದ್ದಾರೆ. ಬಹುತೇಕ ವಿದ್ಯುತ್ ಕಂಬಗಳು ರೈತರ ಭತ್ತದ ಗದ್ದೆ ಹಾಗೂ ತೋಟದಲ್ಲಿ ಹಾದು ಹೋಗಿವೆ. ಬಹಳ ಹಳೆಯದಾದ ಕಂಬಗಳು ಬೀಳುವ ಹಂತದಲ್ಲಿದೆ. ಇವುಗಳನ್ನು ಬದಲಾಯಿಸುವಂತೆ ಮನವಿ ಮಾಡಿದರು.
ನಾಗರಿಕರ ಪ್ರಶ್ನೆಗೆ ಸ್ಥಳದಲ್ಲಿದ್ದ ವೀರಾಜಪೇಟೆ ವಲಯದ ಸೆಸ್ಕಾಂ ಎಇಇ ಸುರೇಶ್ ಮಾತನಾಡಿ, ವಿದ್ಯುತ್ ಮಾರ್ಗದ ಬದಲಾವಣೆಗೆ ಈಗಾಗಲೇ ಇಲಾಖೆಗೆ ಪತ್ರ ಬರೆಯಲಾಗಿದೆ. ಅನುಮತಿ ಬರುವ ನಿರೀಕ್ಷೆಯಿದೆ ಎಂದು ಶಾಸಕರ ಗಮನಕ್ಕೆ ತಂದರು. ೧೬ ಲಕ್ಷ ವೆಚ್ಚವಾಗುವುದರಿಂದ ಮೈಸೂರಿನ ಹಿರಿಯ ಅಧಿಕಾರಿಗಳಿಗೆ ಮಾತನಾಡು ವಂತೆ ಮನವಿ ಮಾಡಿದರು. ಸ್ಥಳದಿಂದ ಮೈಸೂರಿನ ಹಿರಿಯ ಸೆಸ್ಕಾಂ ಅಧಿಕಾರಿಗಳಿಗೆ ಮಾತನಾಡಿದ ಶಾಸಕರು ಸಮಸ್ಯೆಗೆ ಕೂಡಲೇ ಪರಿಹಾರ ಕಂಡುಕೊಳ್ಳುವAತೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಬೋಪಣ್ಣ ಮಾತನಾಡಿ, ಗ್ರಾಮದ ಕಾಲೋನಿಗಳಲ್ಲಿ ವಾಸಿಸುವ ಬಡ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಶಾಶ್ವತ ಕುಡಿಯುವ ನೀರು ಯೋಜನೆಗೆ ಕ್ರಮಕೈಗೊಳ್ಳಲು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಕೊಡಗಿನಲ್ಲಿ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯು ಅತ್ಯಂತ ಸಣ್ಣ ಪಂಚಾಯಿತಿ ಆಗಿದೆ. ಸರ್ಕಾರದ ಅನುದಾನವೂ ಕೂಡ ಕಡಿಮೆ ಮಟ್ಟದಲ್ಲಿ ಬರುತ್ತಿದೆ. ಆದರೆ ಯಾವುದೇ ಪಂಚಾಯಿತಿಗೆ ಕಡಿಮೆ ಇಲ್ಲದಂತೆ ಕೆಲಸ ನಿರ್ವಹಣೆ ನಡೆಯುತ್ತಿದೆ.
ಅಮೃತ ಸರೋವರ, ಫಿಟ್ನೆಸ್ ಜಿಮ್ ಸೆಂಟರ್, ಶಾಲೆಯ ಆವರಣದಲ್ಲಿ ಉದ್ಯಾನವನ, ಸೇರಿದಂತೆ ಹಲವು ಕಾರ್ಯಕ್ರಮ ಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೊಲ್ಲೀರ ಬೋಪಣ್ಣನವರು ತಮ್ಮ ಸ್ವಂತ ೩ ಲಕ್ಷ ಹಣವನ್ನು ಪಂಚಾಯಿತಿ ಅಭಿವೃದ್ಧಿಗೆ ವಿನಿಯೋಗಿಸಿದ್ದಾರೆ. ತೆರೆದ ಬಾವಿಗಳಿಗೆ ರಿಂಗ್ಗಳು ನೀಡಿದ್ದಾರೆ. ರಸ್ತೆ ಬದಿಯಲ್ಲಿ ಬೆಳೆದು ಯೋಜನೆಗೆ ಕ್ರಮಕೈಗೊಳ್ಳಲು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಕೊಡಗಿನಲ್ಲಿ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯು ಅತ್ಯಂತ ಸಣ್ಣ ಪಂಚಾಯಿತಿ ಆಗಿದೆ. ಸರ್ಕಾರದ ಅನುದಾನವೂ ಕೂಡ ಕಡಿಮೆ ಮಟ್ಟದಲ್ಲಿ ಬರುತ್ತಿದೆ. ಆದರೆ ಯಾವುದೇ ಪಂಚಾಯಿತಿಗೆ ಕಡಿಮೆ ಇಲ್ಲದಂತೆ ಕೆಲಸ ನಿರ್ವಹಣೆ ನಡೆಯುತ್ತಿದೆ.
ಅಮೃತ ಸರೋವರ, ಫಿಟ್ನೆಸ್ ಜಿಮ್ ಸೆಂಟರ್, ಶಾಲೆಯ ಆವರಣದಲ್ಲಿ ಉದ್ಯಾನವನ, ಸೇರಿದಂತೆ ಹಲವು ಕಾರ್ಯಕ್ರಮ ಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೊಲ್ಲೀರ ಬೋಪಣ್ಣನವರು ತಮ್ಮ ಸ್ವಂತ ೩ ಲಕ್ಷ ಹಣವನ್ನು ಪಂಚಾಯಿತಿ ಅಭಿವೃದ್ಧಿಗೆ ವಿನಿಯೋಗಿಸಿದ್ದಾರೆ. ತೆರೆದ ಬಾವಿಗಳಿಗೆ ರಿಂಗ್ಗಳು ನೀಡಿದ್ದಾರೆ. ರಸ್ತೆ ಬದಿಯಲ್ಲಿ ಬೆಳೆದು ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು. ನೂತನ ಶಾಸಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ.ಸಿ. ಅಪ್ಪಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೊಲ್ಲೀರ ಬೋಪಣ್ಣ, ಗ್ರಾ.ಪಂ. ಸದಸ್ಯರುಗಳು ಸೇರಿದಂತೆ ಗ್ರಾಮದ ಪ್ರಮುಖರಾದ ಕಡೇಮಾಡ ಕುಸುಮ ಜೋಯಪ್ಪ, ತೀತಿಮಾಡ ಸದಾ ಉಪಸ್ಥಿತರಿದ್ದರು.
ಶಾಸಕರೊಂದಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕಾಂಗ್ರೆಸ್ ಪಕ್ಷದ ಹಿರಿಯರಾದ ಪೆಮ್ಮಂಡ ಕೆ. ಪೊನ್ನಪ್ಪ, ಮೂಕಳೇರ ಕುಶಾಲಪ್ಪ, ಚೇರಂಡ ಮೋಹನ್ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.