ಮಡಿಕೇರಿ, ಅ. ೫: ಯು.ಎಸ್.ಎ.ಯ ಸ್ಟಾ÷್ಯನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.೨ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ. ಮಂಜುನಾಥ ಅವರು ಸತತ ನಾಲ್ಕನೇ ಬಾರಿ ಸ್ಥಾನ ಪಡೆದಿರುತ್ತಾರೆ.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಸಾಯನಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ ಅವರು “ಅನಲೈಟಿಕಲ್ ಮತ್ತು ಎನರ್ಜಿ” ವಿಷಯಗಳಲ್ಲಿ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು ೨೦೨೩ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ೪೫೦೯ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ ೮೯೫೬೧ ನೇ ಸ್ಥಾನವನ್ನು ಪಡೆದಿರುತ್ತಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).