ಗುಡ್ಡೆಹೊಸೂರು, ಅ. ೫: ಇಲ್ಲಿನ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳ ವಿಸರ್ಜನೆ ಅದ್ದೂರಿಯಾಗಿ ನಡೆಯಿತು. ಎಲ್ಲಾ ಸಮಿತಿಗಳ ಮಂಟಪಗಳ ಮೆರವಣಿಗೆ ಆಕರ್ಷಕವಾಗಿತ್ತು. ಗುಡ್ಡೆಹೊಸೂರಿನ ಸಮುದಾಯಭವನದಲ್ಲಿ ಬೆಟ್ಟಗೇರಿಯ ಶ್ರೀಚೌಡೇಶ್ವರಿ ವಿನಾಯಕ ಸೇವಾ ಸಮಿತಿ ವತಿಯಿಂದ, ಬಸವನಹಳ್ಳಿಯ ಸಮಿತಿ, ಹೊಸಕಾಡು ಆನೆಕಾಡು ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ, ಬೊಳ್ಳೂರಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು ವಿಸರ್ಜಿಸಲಾಯಿತು.
ಬೊಳ್ಳೂರಿನ ಸಿರಾಜಳ್ಳದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ, ಬಸವನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ವಿಸರ್ಜನೆಯು ಆದ್ದೂರಿಯಾಗಿ ಮೆರವಣಿಗೆ ನಡೆಸಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಡಿ.ವೈ.ಎಸ್.ಪಿ. ಗಂಗಾಧರಪ್ಪ, ವೃತ್ತ ನಿರೀಕ್ಷಕ ರಾಜೇಶ್, ನಗರ ಠಾಣಾಧಿಕಾರಿಗಳಾದ ಚಂದ್ರಶೇಖರ್, ಗ್ರಾಮಾಂತರ ಠಾಣಾಧಿಕಾರಿ ಮೋಹನ್ರಾಜ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.