ಮಡಿಕೇರಿ, ಅ. ೫ : ಮಡಿಕೇರಿಯ ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ ಮಡಿಕೇರಿ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೧೭ ರಿಂದ ೧೯ರವರೆಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಉಚಿತ ಪ್ರವೇಶಾವಕಾಶವಿದೆ. ಹೆಚ್ಚಿನ ವಿವರ ಹಾಗೂ ಮಾಹಿತಿಗೆ ಮಲ್ಲೇಂಗಡ ರಚನ್ ಪೊನ್ನಪ್ಪ ೯೧೧೦೬೭೭೦೩೦, ೯೯೮೦೦೦೦೪೩೮ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.