ನಾಪೋಕ್ಲು, ಅ. ೫: ಕೊಡವ ಸಮಾಜದ ಅಧಿಕಾರ ಹಸ್ತಾಂತರ ಸಮಾರಂಭ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನಿಕಟಪೂರ್ವ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪÀ ವಹಿಸಿ ಕೊಡವ ಸಮಾಜ ಆರಂಭದಲ್ಲಿ ನಡೆದುಕೊಂಡು ಬಂದಿರುವ ಹಿನ್ನೆಲೆ ಬಗ್ಗೆ ಮಾಹಿತಿ ನೀಡಿದರು. ನೂತನ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಅವರಿಗೆ ಸಮಾಜದ ಲೆಕ್ಕಪತ್ರ ಪುಸ್ತಕವನ್ನು ನೀಡುವುದರೊಂದಿಗೆ ಅಧಿಕಾರ ಹಸ್ತಾಂತರಿಸಿದರು.

ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಮಾತನಾಡಿ, ಕೊಡವ ಜನಾಂಗದ ಅಭಿವೃದ್ಧಿಗೆ ಹಾಗೂ ಕೊಡವ ಸಮಾಜದ ಅಭಿವೃದ್ಧಿಗೆ ಎಲ್ಲಾ ಆಡಳಿತ ಮಂಡಳಿ ಅವರನ್ನು ಒಟ್ಟುಗೂಡಿಸಿ ದುಡಿಯುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ನೂತನ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ನೂತನ ಖಜಾಂಚಿ ಚೌರಿರ ಉದಯ, ನೂತನ ಜಂಟಿ ಕಾರ್ಯದರ್ಶಿ ಮಾಚೇಟಿರ ಕುಸು ಕುಶಾಲಪ್ಪ, ನಿಟಕಪೂರ್ವ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ, ಖಜಾಂಚಿ ಅಪ್ಪಾರಂಡ ಸುಧೀರ್ ಅಯ್ಯಪ್ಪ ಉಪಸ್ಥಿತರಿದ್ದರು.