ಮಡಿಕೇರಿ, ಅ. ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ತಾ.೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಾ. ಮಂಥರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಓ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.