ಸೋಮವಾರಪೇಟೆ, ಅ. ೫: ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪಂದ್ಯಾವಳಿಯಲ್ಲಿ ಇಲ್ಲಿನ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇವರು ಸೋಮವಾರಪೇಟೆಯ ಪುಟ್ಟಸ್ವಾಮಿ ಮತ್ತು ಶೋಭಾ ದಂಪತಿ ಪುತ್ರಿಯಾಗಿದ್ದಾರೆ. ಅಂತೆಯೇ ಓಎಲ್ವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅಪೂರ್ವ ಕಿರಣ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇವರು ಸೋಮವಾರಪೇಟೆ ಪಟ್ಟಣದ ಕಿರಣ್ ಮತ್ತು ರೇಷ್ಮಾ ದಂಪತಿ ಪುತ್ರಿ. ಈರ್ವರು ವಿದ್ಯಾರ್ಥಿನಿಯರು ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.