ಕೊಡ್ಲಿಪೇಟೆ, ಅ. ೫: ಸಂಸ್ಕಾರ ಯುತ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.

ಇಲ್ಲಿನ ಹಲಸಿನಮರ ಗೌರಮ್ಮ ಶಾಂತಮಲ್ಲಪ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಾವಿನಹಳ್ಳಿ ವಿನಾಯಕ ಕುಟುಂಬದ ಪ್ರಾಯೋಜಿತ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಉತ್ತಮ ಶಿಕ್ಷಣದಿಂದ ಭವಿಷ್ಯ ಉಜ್ವಲವಾಗುತ್ತದೆ. ಮಕ್ಕಳಿಗೆ ಎಳೆಯ ವಯಸ್ಸಿನಿಂದಲೇ ಸಂಸ್ಕಾರಯುತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಭವಿಷ್ಯ ಕಟ್ಟಿಕೊಳ್ಳಬೇಕೆಂದು ಕರೆ ನೀಡಿದರು.

ಸಂಸ್ಥೆಯ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಶಾಸಕರು ಪ್ರತಿಭಾ ಪುರಸ್ಕಾರ ನೀಡಿದರು. ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಂಸ್ಥೆಯ ವಿದ್ಯಾರ್ಥಿನಿ ಆಶಾಳಿಗೆ ನಿರ್ದೆಶಕ ಯು.ವಿ. ಶಿವಪ್ರಸಾದ್ ಅವರು ೫ ಸಾವಿರ ಪ್ರೋತ್ಸಾಹ ಧನದ ಚೆಕ್ ವಿತರಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜನಪದ ರತ್ನ ಮಂಡ್ಯದ ಶಿವಾರ ಉಮೇಶ್ ತಂಡದವರಿAದ ಮೂಡಿಬಂದ ಸುಗಮ ಸಂಗೀತ ಮನ ರಂಜಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿದ್ಯಾಸಂಸ್ಥೆಯ ಅಧ್ಯಕ್ಷ ಹಾಗೂ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ, ವಿದ್ಯಾಸಂಸ್ಥೆಯ ಪ್ರತಿಭೆಗಳಿಗೆ ಪುರಸ್ಕಾರ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜನಪದದ ಬಗ್ಗೆ ಜಾಗೃತಿ ಮೂಡಲಿ ಎಂಬ ಉದ್ದೇಶದಿಂದ ರಾಜ್ಯ ಮಟ್ಟದ ಜನಪದ ಹಾಡುಗಾರರಿಂದ ಸುಗಮ ಸಂಗಿತ ಆಯೋಜಿಸಲಾಗಿದೆ. ಜನಪದ ಈ ಮಣ್ಣಿನ ಸೊಗಡು; ಅದನ್ನು ಪ್ರೋತ್ಸಾಹಿಸಿ ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ವಿದ್ಯಾಸAಸ್ಥೆಯ ಆಡಳಿತ ಮಂಡಳಿ ಖಜಾಂಚಿ ಡಾ. ಉದಯ್ ಕುಮಾರ್, ಕಾರ್ಯದರ್ಶಿ ಶಾಂತಮಲ್ಲಪ್ಪ, ನಿರ್ದೇಶಕರುಗಳಾದ ಶಂಭುಲಿAಗಪ್ಪ, ಶಿವಪ್ರಸಾದ್, ಬಿ.ಕೆ. ಯತೀಶ್, ನಾಗರಾಜ್, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನೀಫ್, ಪ್ರಾಂಶುಪಾಲ ನಿರಂಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.