ಮಡಿಕೇರಿ, ಅ. ೫: ತುಲಾ ಸಂಕ್ರಮಣ ಜಾತ್ರೆ ಪ್ರಯುಕ್ತ ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಲು ತಾ. ೬ ರಂದು (ಇಂದು) ಎಫ್-೬ ಭಾಗಮಂಡಲ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಇದರಿಂದ ಭಾಗಮಂಡಲ, ಚೇರಂಬಾಣೆ, ಚೆಟ್ಟಿಮಾನಿ, ಬೆಟ್ಟಗೇರಿ, ಕಾರಗುಂದ ವ್ಯಾಪ್ತಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆ ಮನವಿ ಮಾಡಿದೆ.