ಮುಳ್ಳೂರು, ಅ. ೬: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕ ಹಾಗೂ ಯುವ ಘಟಕದ ಸಹಯೋಗದೊಂದಿಗೆ ತಾ. ೭ ಮತ್ತು ೮ ರಂದು ಗುಡುಗಳಲೆ ಜಾತ್ರಾ ಮೈದಾನದಲ್ಲಿ ಶ್ರೀ ದೊಡ್ಡವೀರ ರಾಜೇಂದ್ರ ಒಡೆಯರ್ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಪ್ರಕಟಣೆ ತಿಳಿಸಿದೆ.

ತಾ. ೭ ರಂದು ಬೆಳಿಗ್ಗೆ ೮ ಗಂಟೆಗೆ ಶನಿವಾರಸಂತೆ ಕೆಆರ್‌ಸಿ ವೃತ್ತದಿಂದ ಗುಡುಗಳಲೆ ಜಾತ್ರಾ ಮೈದಾನಕ್ಕೆ ಕ್ರೀಡಾಜ್ಯೋತಿಯನ್ನು ತರಲಾಗುತ್ತದೆ. ತಪೋವನ ಮನೆಹಳ್ಳಿ ಮಠಾಧೀಶ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಕ್ರೀಡಾಜ್ಯೋತಿ ಬೆಳಗುತ್ತಾರೆ. ಕ್ರೀಡಾಕೂಟವನ್ನು ಶಾಸಕ ಬಿ.ವೈ.ವಿಜೇಂದ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಾಸಭಾದ ರಾಷ್ಟಿçÃಯ ಉಪಾಧ್ಯಕ್ಷ ಸಚ್ಚಿದಾನಂದಮೂರ್ತಿ, ರಾಜ್ಯ ಯುವ ಘಟಕದ ಅಧ್ಯಕ್ಷ ಜಿ.ಮನೋಹರ್ ಅಬ್ಬಿಗೆರೆ, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ಉಪಸ್ಥಿತರಿರಲಿದ್ದಾರೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಯಾಡಲಿದ್ದು, ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಆಶಯ ನುಡಿಯಾಡುತ್ತಾರೆ. ಕಾರ್ಯಕ್ರಮದಲ್ಲಿ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಶ್ರೀ ಚನ್ನಬಸವದೇಶೀಕೇಂದ್ರ ಸ್ವಾಮೀಜಿ, ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮಲ್ಲೇಶ ಸ್ವಾಮೀಜಿ, ಮಹಾಂತ ಶಿವಲಿಂಗಸ್ವಾಮೀಜಿ, ಇಮ್ಮಡಿ ಶಿವಲಿಂಗ ಸ್ವಾಮೀಜಿ, ಶ್ರೀ ರುದ್ರಮುನಿ ಸ್ವಾಮೀಜಿ, ಶ್ರೀ ಮೋಕ್ಷಪತಿ ಸ್ವಾಮೀಜಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.