ಸೋಮವಾರಪೇಟೆ, ಅ. ೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ತಾ.೭ರಂದು (ಇಂದು) ಪೂರ್ವಾಹ್ನ ೧೦.೩೦ಕ್ಕೆ ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಹಾಗೂ ನವಜೀವನ ಸಮಿತಿ ಸಮಾವೇಶ ನಡೆಯಲಿದೆ.
ಶಾಸಕ ಡಾ. ಮಂಥರ್ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.