ಗೋಣಿಕೊಪ್ಪ ವರದಿ, ಅ. ೬: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರ‍್ವತೊಕ್ಲು ಸರ್ವದೈವತಾ ಪ್ರೌಢಶಾಲೆಯ ಬಾಲಕರ ಥ್ರೋಬಾಲ್ ತಂಡವು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ-ಬಾಲಕಿಯರ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ನೀಲೇಶ್ - ಪವನ್, ಬಾಲಕಿಯರ ವಿಭಾಗದಲ್ಲಿ ಕುಸುಮ್ - ಫರ್ಜಾನಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.