ಸೋಮವಾರಪೇಟೆ, ಅ. ೫: ಇಲ್ಲಿನ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದಿAದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಪಟ್ಟಣದಲ್ಲಿ ಸಾರ್ವಜನಿಕರಿಗೆ ಪವಿತ್ರ ಕಾವೇರಿ ತೀರ್ಥ ವಿತರಣೆ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು ತಿಳಿಸಿದ್ದಾರೆ.
ತಾ. ೧೯ರಂದು ಪಟ್ಟಣದ ಕಾವೇರಿ ಪ್ರತಿಮೆಗೆ ದಾನಿಗಳಾದ ಹರಪಳ್ಳಿ ರವೀಂದ್ರ ಅವರು ಪೂಜೆ ಸಲ್ಲಿಸಲಿದ್ದು, ನಂತರ ಜೇಸೀ ವೇದಿಕೆಯಲ್ಲಿ ಸಾರ್ವಜನಿಕರಿಗೆ ಕಾವೇರಿ ತೀರ್ಥ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.