ಮಡಿಕೇರಿ, ಅ.೫ : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ೯ ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ ೫ ಹಂತಗಳ ಪಾದಯಾತ್ರೆಯಲ್ಲಿ ೩ನೇ ಹಂತದ ಪಾದಯಾತ್ರೆ ತಾ.೭ ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ತಾ. ೭ ರಂದು ಬೆಳಿಗ್ಗೆ ೧೦ ಗಂಟೆಗೆ ಕಂಗಳತ್ನಾಡ್ (ಗೋಣಿಕೊಪ್ಪ-ಮಾಯಮುಡಿ) ೩.೦೦ ಗಂಟೆಗೆ ಅರ್ಕೇರಿನಾಡ್ (ಬಾಳೆಲೆ) (ಪೊನ್ನಂಪೇಟೆ ತಾಲೂಕು), ಅ.೮ ರಂದು ಬೆಳಗ್ಗೆ ೧೦ ಗಂಟೆಗೆ ಕಿರ್ನಾಲ್ನಾಡ್ (ಕರ್ಗೂರ್-ಬೆಸಗೂರ್), ೩ ಗಂಟೆಗೆ ಪತ್ತ್ ಕಟ್ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) (ಪೊನ್ನಂಪೇಟೆ ತಾಲೂಕು), ಅ.೯ ರಂದು ಬೆಳಗ್ಗೆ ೧೦ ಗಂಟೆಗೆ ತೊಡನಾಡ್ (ಕುಮಟೂರ್-ಶ್ರೀಮಂಗಲ), ೨.೩೦ ಗಂಟೆಗೆ, ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು), ಅ.೧೦ ರಂದು ಬೆಳಗ್ಗೆ ೧೦ ಗಂಟೆಗೆ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ಈ ನಾಲ್ಕು ನಾಡು ಮಂದ್ಗಳಲ್ಲಿ ಸಭೆ (ಬಾಡಗರ ಕೇರಿ-ತೆರಾಲ್-ಬಿರುನಾಣಿ) (ಪೊನ್ನಂಪೇಟೆ ತಾಲ್ಲೂಕು), ಅ.೧೧ ರಂದು ಬೆಳಗ್ಗೆ ೧೦ ಗಂಟೆಗೆ ತಾಳೆರಿನಾಡ್ (ಟಿ.ಶೆಟ್ಟಿಗೇರಿ), ೨.೩೦ ಗಂಟೆಗೆ ಅಂಜಿಗೇರಿನಾಡ್ (ಹುದಿಕೇರಿ-ಬೇಗೂರು) (ಪೊನ್ನಂಪೇಟೆ ತಾಲೂಕು) ನಲ್ಲಿ ನಡೆಯಲಿದೆ ಎಂದು ನಾಚಪ್ಪ ಹೇಳಿದ್ದಾರೆ.