ಗೋಣಿಕೊಪ್ಪಲು, ಅ. ೫ : ಮಕ್ಕಳ ಬೆಳವಣಿಗೆಗೆ ಪೌಷ್ಠಿಕ ಆಹಾರ ಸಹಕಾರಿಯಾಗಿದ್ದು ಇವುಗಳನ್ನು ಹೆಚ್ಚು ಹೆಚ್ಚಾಗಿ ಬಾಣಂತಿಯರು, ಮಕ್ಕಳು ಉಪಯೋಗಿಸುವಂತೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪೊನ್ನಂಪೇಟೆ ಹಾಗೂ ಹುದಿಕೇರಿ ವರ್ತುಲ ಇವರ ಸಹಯೋಗದಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು, ಮಗುವಿನ ಬೆಳವಣಿಗೆಗೆ ಪೌಷ್ಟಿಕ ಆಹಾರ ತುಂಬಾ ಅವಶ್ಯಕತೆಯಾಗಿದೆ. ತಮ್ಮ ಮನೆಯ ಸುತ್ತಮುತ್ತಲಿನಲ್ಲಿಯೇ ಸೊಪ್ಪು ತರಕಾರಿಗಳನ್ನು ಬಾಣಂತಿಯರು ಹೆಚ್ಚಾಗಿ ಬಳಸಬೇಕು.
ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಸಿಗುವ ಪೌಷ್ಟಿಕ ಆಹಾರಗಳನ್ನು ಬಳಕೆ ಮಾಡಬೇಕು. ಅಪೌಷ್ಟಿಕತೆಯಿಂದ ಉಂಟಾಗುವ ತಾಯಿ ಮರಣ ಹಾಗೂ ಶಿಶು ಮರಣ ತಪ್ಪಿಸಬೇಕು, ಮಕ್ಕಳಲ್ಲಿ ಉಂಟಾಗುವ ಕುಂಠಿತ ಬೆಳವಣಿಗೆಯನ್ನು ತಡೆಗಟ್ಟಬೇಕು. ಚಿಕ್ಕ ಮಕ್ಕಳಲ್ಲಿ, ಕಿಶೋರಿಯರಲ್ಲಿ ಹಾಗೂ ಗರ್ಭಿಣಿಯರಲ್ಲಿ ಉಂಟಾಗುವ ರಕ್ತ ಹೀನತೆಯನ್ನು ಕಡಿಮೆಗೊಳಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಇಲಾಖೆಯ ಮೂಲಕ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿವೆ. ಇದರ ಪ್ರಯೋಜನವನ್ನು ತಾಯಂದಿರು, ಗರ್ಭಿಣಿಯರು ಸದ್ಬಳಕೆ ಮಾಡಿಕೊಡುವಂತೆ ಕರೆ ನೀಡಿದರು. ಮಕ್ಕಳಿಗೆ ಅನ್ನ ಪ್ರಾಶನ, ಗರ್ಭಿಣಿಯರಿಗೆ ಸೀಮಂತ, ಪುಟಾಣಿ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡುವ ಕಾರ್ಯಕ್ಕೆ ಪೊನ್ನಣ್ಣ ಚಾಲನೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್. ರಾಜೇಶ್, ರಾಷ್ಟಿçÃಯ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಮಾರ್ಚ್ ೨೦೧೮ರಲ್ಲಿ ರಾಜಸ್ಥಾನದಲ್ಲಿ ಪ್ರಾರಂಭಿಸಲಾಯಿತು. ರಾಷ್ಟಿçÃಯ ಪೋಷಣ ಅಭಿಯಾನ ಕಾರ್ಯಕ್ರಮವು ೬ ತಿಂಗಳಿನಿAದ ೩ ವರ್ಷದವರೆಗಿನ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಟಿಕತೆಯ ಸ್ಥಿತಿಯನ್ನು ನಿರ್ದಿಷ್ಟ ಅವಧಿಗೆ ಅನುಗುಣವಾಗಿ ಸುಧಾರಿಸುವ ಸಲುವಾಗಿ ಪ್ರಾರಂಭಿಸಲಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್, ಪರಿಸರದಲ್ಲಿ ಸಿಗುವ ಪೌಷ್ಟಿಕ ಆಹಾರವನ್ನು ಬಳಸಬೇಕು. ಹಣ್ಣುಹಂಪಲು ಹಾಗೂ ಸೊಪ್ಪುಗಳನ್ನು ಹೆಚ್ಚಾಗಿ ಬಳಸಬೇಕು. ಇದರಿಂದ ಪೌಷ್ಟಿಕ ಆಹಾರದ ಕೊರತೆಯನ್ನು ನೀಗಿಸಬಹುದು. ಮಾಸಾಚರಣೆ ಮೂಲಕ ತಮಗೆ ಆರೋಗ್ಯ ಶಿಕ್ಷಣವನ್ನು ಆರೋಗ್ಯ ಇಲಾಖೆ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ರೂಪಿಸುತ್ತಿದೆ. ನೀಡುವ ಮಾಹಿತಿಗಳನ್ನು ಬಾಣಂತಿಯರು ಪಾಲಿಸಬೇಕು. ಕೊಡಗಿನಲ್ಲಿ ತರಕಾರಿ ಸೊಪ್ಪು ಬೆಳೆಯಲು ಉತ್ತಮ ಅವಕಾಶವಿದೆ. ಇದರಿಂದ ಸಾಕಷ್ಟು ಪೌಷ್ಠಿಕಾಂಶ ದೊರೆಯುತ್ತದೆ ಎಂದರು.
ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಸಿ.ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ ಬಿ.ಎನ್. ಗುರುರಾಜ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಸ್. ರೀತಾ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಸುಮಿತ್ರ, ಅರುವತ್ತೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶರೀಫಾ ಬಾನು, ಹುದಿಕೇರಿ ಗ್ರಾ.ಪಂ. ಅಧ್ಯಕ್ಷೆ ನಿವ್ಯ ಕಾವೇರಮ್ಮ, ಸೇರಿದಂತೆ ಇನ್ನಿತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಹುದಿಕೇರಿ ವರ್ತುಲದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಸಿಡಿಪಿಓ ಕೆ.ಆರ್. ರಾಜೇಶ್, ಸ್ವಾಗತಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನೂರಾರು ಬಗೆಯ ಪೌಷ್ಟಿಕ ಆಹಾರ ಗಮನ ಸೆಳೆಯಿತು.