ವೀರಾಜಪೇಟೆ, ಅ. ೫ : ಕ್ರೀಡಾ ಪಟುಗಳು ಸಾಧನೆ ಮಾಡಲು ಶಿಸ್ತು ಮುಖ್ಯವಾಗಿದೆ ಎಂದು ಅಂರ‍್ರಾ ಷ್ಟಿçÃಯ ರಗ್ಬಿ ಆಟಗಾರ ಹಾಗೂ ಪ್ರಗತಿ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಸಲಹೆ ನೀಡಿದರು.

ವೀರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟç ಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕಾಲೇಜು ಜೀವನ ಅತೀ ಮುಖ್ಯವಾಗಿದೆ. ಆಟಗಾರರು ಶಿಸ್ತನ್ನು ಕಾಪಾಡುವುದರ ಮೂಲಕ ಆರೋಗ್ಯಕರ ಜೀವನ ನಡೆಸುವಂತಾ ಗಬೇಕು. ಆಟದಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಹೇಳಿದರು.

ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ವಿದ್ಯಾ ರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯು ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿ ಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಾ ಕರ್ ಮಾತನಾಡಿ, ಕ್ರೀಡೆಗಳು ವಿದ್ಯಾ ರ್ಥಿಗಳಲ್ಲಿ ಆತ್ಮಸ್ಥೆöÊರ್ಯ ಮೂಡಿ ಸುವುದರ ಜೊತೆಗೆ ಬಾಂಧವ್ಯವನ್ನು ಬೆಸೆಯುತ್ತವೆ ಎಂದರು.

ವೇದಿಕೆಯಲ್ಲಿ ವೀರಾಜಪೇಟೆಯ ಪ್ರಕೃತಿ ಮಾರ್ಕೆಟಿಂಗ್‌ನ ಮೊಹಮ್ಮದ್ ಷರೀಫ್, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ದೈಹಿಕ ಶಿಕ್ಷಕ ನಿರ್ದೇಶಕ ರಾಜು ರೈ ಅವರು ಉಪಸ್ಥಿತರಿದ್ದರು.

ಉದ್ಘಾಟನಾ ಪಂದ್ಯವು ವೀರಾಜ ಪೇಟೆಯ ಸಂತ ಅನ್ನಮ್ಮ ಶಾಲೆ ಹಾಗೂ ಪ್ರಗತಿ ಶಾಲಾ ವಿದ್ಯಾರ್ಥಿಗಳ ನಡುವೆ ನಡೆಯಿತು. ಈ ಸಂದರ್ಭ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಉಪನ್ಯಾಸಕಿ ಹೇಮಾ ಇದ್ದರು.