ಕೂಡಿಗೆ, ಅ. ೬: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಮೊದಲು ಚರ್ಚೆಗಳನ್ನು ನಡೆಸಿ ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಈಗಾಗಲೇ ಕೈಗೊಂಡಿರುವ ಸ್ವಚ್ಛತೆ ಪೂರಕವಾಗಿ ಮತ್ತು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳ ಶುದ್ಧೀಕರಣಗೊಳಿಸುವ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಚರ್ಚೆಗಳು ನಡೆದವು. ಜೊತೆಗೆ ಬಸವತ್ತೂರು ಗ್ರಾಮದಲ್ಲಿರುವ ಆನೆ ಕೆರೆಯ ಸಮೀಪದಲ್ಲಿ ಕೋಳಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಚರ್ಚೆಗಳು ನಡೆದವು. ಅಲ್ಲದೆ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಮೋದನೆ ಮತ್ತು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬAಧಿಸಿದ ಚರ್ಚೆಗಳು ನಡೆದವು.

ಜಲ ಜೀವನ್ ಕುಡಿಯುವ ನೀರಿನ ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಭೆಯಲ್ಲಿ ಹಾಜರಿದ್ದ ಸದಸ್ಯರು ಒತ್ತಾಯ ಮಾಡಿದರು. ಈಗಾಗಲೇ ಕೈಗೊಂಡಿರುವ ಕ್ರಿಯಾ ಯೋಜನೆಯ ಅನುಮೋದನೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ವಿಷಯಗಳ ಪ್ರಸ್ತಾವನೆ ನಡೆಸಿ, ಗ್ರಾಮದ ಅಭಿವೃದ್ಧಿಗೆ ಸಂಬAಧಿಸಿದAತೆ ವಿವಿಧ ಯೋಜನೆಗಳ ತಯಾರಿಸುವ ಚರ್ಚೆ ನಡೆಯಿತು.

ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸರಕಾರ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ನಂತರ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಮಾಹಿತಿಯನ್ನು ನೀಡಿದರು.

ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶಶಿಕಲಾ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಜರಿದ್ದರು.