ಮಡಿಕೇರಿ, ಅ. ೬: ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಮರಂದೋಡ, ಚೇಲಾವರ, ಕೋಕೇರಿ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಾ. ೭ರಂದು (ಇಂದು) ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸ ಬೇಕಾಗಿ ಹಾಗೂ ಈ ಸಮಯದಲ್ಲಿ ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದೆಂದು ವೀರಾಜಪೇಟೆ ವಲಯ ಅರಣ್ಯಾಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.