ಶನಿವಾರಸಂತೆ, ಅ. ೬: ಶನಿವಾರಸಂತೆ ಸಮೂಹ ಸಂಪನ್ಮೂಲ ಕೇಂದ್ರಕ್ಕೆ ಶಾಸಕ ಡಾ. ಮಂಥರ್ ಗೌಡ ಭೇಟಿ ನೀಡಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿ ಗಳನ್ನು ಪರಿಶೀಲಿಸಿದರು. ಶಾಲೆಯಲ್ಲಿ ವಿವೇಕ ಯೋಜನೆಯಡಿ ನಿರ್ಮಾಣ ವಾಗುತ್ತಿರುವ ವಿವೇಕ ಕೊಠಡಿಗಳ ಕಾಮಗಾರಿಯ ಪ್ರಗತಿ ಪರಿಶೀಲಿ ಸಿದರು. ಕಾಮಗಾರಿ ಪೂರ್ಣ ಗೊಂಡಿರುವ ಅಕ್ಷರ ದಾಸೋಹ ಕೊಠಡಿಯನ್ನು ಉದ್ಘಾಟಿಸುವ ಭರವಸೆ ನೀಡಿದರು. ದುಸ್ಥಿತಿ ಯಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣ ದುರಸ್ತಿ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಅನುದಾನದಲ್ಲಿ ರೂ. ೭ ಲಕ್ಷ ಮೀಸಲಿಡುವ ಭರವಸೆ ನೀಡಿದರು. ಗ್ರಾ.ಪಂ. ವತಿಯಿಂದ ನಿರ್ಮಿಸುತ್ತಿರುವ ಶೌಚಾಲಯ ಕಾರ್ಯಪ್ಪ ಸಭಾಂಗಣ ದುರಸ್ತಿ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಅನುದಾನದಲ್ಲಿ ರೂ. ೭ ಲಕ್ಷ ಮೀಸಲಿಡುವ ಭರವಸೆ ನೀಡಿದರು. ಗ್ರಾ.ಪಂ. ವತಿಯಿಂದ ನಿರ್ಮಿಸುತ್ತಿರುವ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಶಾಸಕ ಡಾ. ಮಂಥರ್ ಗೌಡರ ಜತೆ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್, ಇತರ ಅಧಿಕಾರಿಗಳು, ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ ದಿನೇಶ್, ಮುಖ್ಯಶಿಕ್ಷಕ ವಿಶ್ವನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಉಪಾಧ್ಯಕ್ಷ ಸರ್ದಾರ್ ಅಹಮ್ಮದ್, ಸದಸ್ಯರಾದ ಎಸ್.ಸಿ. ಶರತ್ ಶೇಖರ್, ಸರೋಜಾ, ಆದಿತ್ಯ, ಮಧು, ಪಿಡಿಓ ಹರೀಶ್, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.