ಮಡಿಕೇರಿ, ಅ. ೮: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತಾಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗೆ ಸಹಕಾರ ಕಾಯ್ದೆ, ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮವು ತಾ.೧೧ ರಂದು ಬೆಳಗ್ಗೆ ೧೧ ಗಂಟೆಗೆ ಕೂಡಿಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಹಾಸನ ಹಾಲು ಒಕ್ಕೂಟದ ನಿರ್ದೇಶಕರಾದ ಕೆ.ಕೆ.ಹೇಮಂತ್ ಕುಮಾರ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಎ.ಕೆ. ಮನು ಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರು, ಇತರರು ಪಾಲ್ಗೊಳ್ಳಲಿದ್ದಾರೆ.