ಮಡಿಕೇರಿ, ಅ. ೭: ಕ್ರೀಡಾ ಪಟುಗಳು ಸ್ಪರ್ಧಾ ಹಾಗೂ ಕ್ರೀಡಾ ಮನೋಭಾವದಿಂದ ಕ್ರೀಡಾ ಚಟುವಟಿ ಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಯನ್ನು ಪ್ರದರ್ಶಿಸಬೇಕು ಎಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ.ಸೌಮ್ಯ ಪೊನ್ನಪ್ಪ ಹೇಳಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೊಡಗಿನ ಕ್ರೀಡಾಪಟುಗಳು ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟಕ್ಕೆ ಹೋಗುವ ಮೂಲಕ ತಮ್ಮ ಜಿಲ್ಲೆಯ ಕೀರ್ತಿ ಎತ್ತಿಹಿಡಿಯಬೇಕು ಎಂದರು.

ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ಅವರು ಕ್ರೀಡಾಪಟುಗಳಿಂದ ಪಥಸಂಚ ಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಹಾಗೂ ಚೈತನ್ಯವನ್ನು ತುಂಬು ತ್ತದೆ. ಎಲ್ಲಾ ಪ್ರವೃತ್ತಿಗಳಲ್ಲೂ ಉತ್ತಮ ಪ್ರವೃತ್ತಿ ಕ್ರೀಡೆಯೇ ಆಗಿದ್ದು ದೈಹಿಕ, ಮಾನಸಿಕ ಹಾಗೂ ಆರೋಗ್ಯ ಪೂರ್ಣ ತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.

ಮಡಿಕೇರಿ ಶಾಲಾ ಶಿಕ್ಷಣ ಇಲಾ ಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಕ್ರೀಡಾ ಜ್ಯೋತಿ ಬೆಳಗಿಸಿದರು.

ಮಡಿಕೇರಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ವೀರಾಜಪೇಟೆ ತಾಲೂಕು ದೈಹಿಕ ಪರಿವೀಕ್ಷಕಿ ಬಿ.ಆರ್.ಗಾಯಿತ್ರಿ, ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಪಿ.ಎ.ಪ್ರವೀಣ್, ಜಿಲ್ಲಾ ಗ್ರೇಡ್ ೨ ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಬಿ.ಟಿ.ಪೂರ್ಣೇಶ್, ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕ ನೌಕರರ ಸಂಘದ ಅಧ್ಯಕ್ಷ ಪ್ರಭುಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಅನುದಾನಿತ ಪ್ರೌಢಶಾಲಾ ಮತ್ತು ಕಾಲೇಜು ನೌಕರರ ಸಂಘ ಮಡಿಕೇರಿ ಅಧ್ಯಕ್ಷ ಕೆ.ಶಿವಪ್ರಸಾದ್, ಗ್ರೇಡ್ ೧ ದೈಹಿಕ ಶಿಕ್ಷಣ ಶಿಕ್ಷಕ ಸಂಘ ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಎಂ.ಕಿರಣ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಮಡಿಕೇರಿ ತಾಲೂಕು ಅಧ್ಯಕ್ಷ ಕೆ.ಜಿ.ಅಶೋಕ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಿ.ಕೆ.ಶಿವಶಂಕರ್ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಕೆ.ಶಿವಪ್ರಸಾದ್ ಅವರು ದೈಹಿಕ ಶಿಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕ್ರೀಡಾಪಟು ದೇಚಮ್ಮ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಶಿಕ್ಷಕಿ ಮಮತಾ ಪ್ರಾರ್ಥಿಸಿದರು. ಮೂರ್ನಾಡು ಜ್ಞಾನ ಜ್ಯೋತಿ ಶಾಲೆಯ ಬ್ಯಾಂಡ್ ವಾದ್ಯದೊಂದಿಗೆ ವಿವಿಧ ತಾಲೂಕಿನ ಕ್ರೀಡಾಪಟುಗಳು ಪಥ ಸಂಚಲನ ನಡೆಸಿದರು. ಇದೇ ಸಂದರ್ಭ ಮಡಿಕೇರಿ ತಾಲೂಕು ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ತಿಮ್ಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸದಾಶಿವಯ್ಯ ಎಸ್. ಪಲ್ಲೇದ್ ವಂದಿಸಿದರು.