ವೀರಾಜಪೇಟೆ, ಅ. ೭: ಶ್ರೀ ಕೃಷ್ಣನ ಉಪದೇಶಾಮೃತವಾದ ಭಗವದ್ಗೀತೆ ಸರ್ವಕಾಲಿಕ ಸತ್ಯ. ಸನಾತನ ಧರ್ಮದಲ್ಲಿ ಭಗವದ್ಗೀತೆಯನ್ನು ಪವಿತ್ರ ಗ್ರಂಥವೆAದು ಪರಿಗಣಿಸಲಾಗಿದೆ ಎಂದು ಹಿರಿಯ ಸಾಹಿತಿಗಳಾದ ಕಿಗ್ಗಾಲು ಗಿರೀಶ್ ಅಭಿಪ್ರಾಯಪಟ್ಟರು.
ಕಾವೇರಿ ಗಣೇಶೋತ್ಸವ ಸಮಿತಿ ಮೂರ್ನಾಡು ರಸ್ತೆ ಹಾಗೂ ವೀರಾಜಪೇಟೆ ಮಹಿಳಾ ಲೇಖಕಿಯರ ಬಳಗದ ವತಿಯಿಂದ ಗಣೇಶೋತ್ಸವ ಸಮಿತಿ ವೇದಿಕೆಯಲ್ಲಿ ನಡೆದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಿಗ್ಗಾಲು ಗಿರೀಶ್ ಅವರು, ಶ್ರೀ ಕೃಷ್ಣನು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಗೀತೆಯನ್ನು ಉಪದೇಶಿಸಿದನೆಂಬ ನಂಬಿಕೆಯಿದೆ. ಈ ಮೂಲಕ ಅವರು ಜೀವನದ ಸಾರವನ್ನು ಜನರಿಗೆ ವಿವರಿಸಲು ಪ್ರಯತ್ನಿಸಿದರು. ಯಾವಾಗ ಅರ್ಜುನನು ಕೌರವರ ವಿರುದ್ಧ ಹೋರಾಡಲು ಬಯಸ ಲಿಲ್ಲವೋ ಆಗ ಶ್ರೀ ಕೃಷ್ಣನು ನೀನು ನಿರ್ಭಯವಾಗಿ ಹೋರಾಡು ಎಂದು ಹೇಳಿದನೆಂದು ಈ ಗೀತೆಯಲ್ಲಿ ಹೇಳ ಲಾಗಿದೆ. ಕೊಂದರೆ ಸ್ವರ್ಗ ಸಿಗುತ್ತದೆ, ಗೆದ್ದರೆ ಭೂಮಿಯನ್ನು ಆಳುವಿರಿ. ಹಾಗಾಗಿ ಯಾವುದೇ ಕೆಲಸದಲ್ಲಿ ಯಶಸ್ಸು ಸಿಗಬೇಕಾದರೆ ಮನಸ್ಸಿನಿಂದ ಭಯವನ್ನು ತೊಲಗಿಸಬೇಕು ಎಂದು ಹೇಳುತ್ತಾನೆ. ಗೀತೆಯ ಕೆಲವು ಶ್ಲೋಕ ಗಳನ್ನು ಅನುಸರಿಸಿದರೆ, ಜೀವನದಲ್ಲಿ ಅಪಾರ ಯಶಸ್ಸನ್ನು ಸಾಧಿಸಬಹುದು. ಭಗವದ್ಗೀತೆ ಎಲ್ಲ ಧರ್ಮದವರಿಗೂ ಪ್ರೇರಣೆಯಾಗುವ ಗ್ರಂಥ ಎಂದರು.
ಇನ್ನೋರ್ವ ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡು ಮಾತನಾಡಿದ ಉಪನ್ಯಾಸಕ ಎಸ್. ರಘುನಾಥ್ ಅವರು ಶ್ರೀ ಕೃಷ್ಣ ಹಾಗೂ ಸುಧಾಮನ ಬಾಂಧವ್ಯ ಗೆಳೆತನಕ್ಕೆ ಮಾದರಿಯಾಗಿದೆ. ದೇಶದಲ್ಲಿ ಆದ್ಯ ದೇವತೆಯಾಗಿ ಪೂಜಿಸಲ್ಪಡುವ ಶ್ರೀ ಕೃಷ್ಣನ ಸಂದೇಶಗಳನ್ನು ಪ್ರತಿ ಯೊಬ್ಬರು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದರು. ಮುಖ್ಯ ಅತಿಥಿ ಗಳಾದ ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ. ಆನಂದ್ ಕಾರ್ಲಾ ಅವರು ಮಾತನಾಡಿ, ಗೀತೆಯನ್ನು ಜೀವನದ ಮಾರ್ಗದರ್ಶನ ಮತ್ತು ಮೋಕ್ಷ ಸಾಧನೆ ಗಾಗಿ ಅರ್ಥ ತಿಳಿದು ಪಠಿಸ ಬೇಕೆಂಬುದು ಪ್ರಾಜ್ಞರ ಅಭಿಮತವಾಗಿದೆ ಎಂದರು. ಕಾವೇರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಆನಂದ್ ರಾಜಪ್ಪ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ಪ್ರತಿದಿನ ನಾವು ಭಗವದ್ಗೀತೆಯ ಶ್ಲೋಕವನ್ನು ಪಠಿಸಿದರೆ ಮನಸ್ಸಿನಲ್ಲಿ ಸುಖ, ಶಾಂತಿ, ಆತ್ಮಸ್ಥೆರ್ಯ ಮೂಡಲು ಸಾಧ್ಯ ಎಂದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಬಳಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದುಕೊಂಡವರಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಯಿತು. ತೀರ್ಪುಗಾರರಾಗಿ ಗಿರೀಶ್ ಕಿಗ್ಗಾಲು, ಎಸ್ ರಘುನಾಥ್ ಕಾರ್ಯ ನಿರ್ವಹಿಸಿದರು. ಕಾರ್ಯ ಕ್ರಮದಲ್ಲಿ ಕಾವೇರಿ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ, ವಕೀಲರೂ ಆಗಿರುವ ವಿ.ಜಿ. ರಾಕೇಶ್, ಹರ್ಷಕೀರ್ತಿ, ಪ್ರಿಯಾಂಕ ಸೇರಿದಂತೆ ಸಮಿತಿಯ ಆಡಳಿತ ಮಂಡಳಿ ಪದಾಧಿ ಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು, ಸಾರ್ವ ಜನಿಕರು ಹಾಜರಿದ್ದರು. ಕಾರ್ಯ ಕ್ರಮದಲ್ಲಿ ಸಂತ ಅನ್ನಮ್ಮ ಕಾಲೇಜು ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿ, ಸಾಹಿತಿಗಳಾದ ರಜಿತ ಕಾರ್ಯಪ್ಪ ಸ್ವಾಗತಿಸಿ, ಪುಷ್ಪಲತಾ ಶಿವಪ್ಪ ಹಾಗೂ ವಿಮಲ ದಶರಥ ನಿರೂಪಿಸಿದರೆ, ವಿದುಷಿ ಪ್ರೇಮಾಂಜಲಿ ಆಚಾರ್ಯ ವಂದಿಸಿದರು.