ಮಡಿಕೇರಿ, ಅ. ೭: ಪರಿಸರ ಸಮ ತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶನಿವಾರ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇ ಜಿನಲ್ಲಿ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕಾಲೇಜಿನ ಎನ್.ಸಿ.ಸಿ., ಘಟಕದ ಸಂಯುಕ್ತಾ ಶ್ರಯದಲ್ಲಿ "ವನ್ಯಜೀವಿಗಳ ಸಂರಕ್ಷಣೆ ಗಾಗಿ ಪಾಲುಗಾರಿಕೆ" ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ೬೯ನೇ ವನ್ಯಜೀವಿ ಸಪ್ತಾಹ: ೨೦೨೩ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊAದಿಗೆ ಜೀವ ವೈವಿ ಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿ ಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು. ವನ್ಯ ಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನ್ನು ತಡೆ ಯುವ ಮೂಲಕ ವನ್ಯಜೀವಿಗಳ ಸಂರ ಕ್ಷಣೆಗೆ ಪಣ ತೊಡಬೇಕಿದೆ ಎಂದರು.
ವನ್ಯಜೀವಿ ಸಪ್ತಾಹದ ಉದ್ದೇಶ ಹಾಗೂ "ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ಸಮು ದಾಯದ ಸಹಭಾಗಿತ್ವ" ಕುರಿತು ಮಾಹಿತಿ ನೀಡಿ ಮಾತನಾಡಿದ ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಶಿವರಾಮ್ ಬಾಬು ಪರಿಸರದಲ್ಲಿ ಜೇನುನೊಣಗಳ ಪಾತ್ರ ಅತಿ ಮುಖ್ಯವಾಗಿದ್ದು, ಇವುಗಳು ಆಹಾರ ಸರಪಳಿ ಮತ್ತು ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡಿಕೊ ಳ್ಳಲು ಸಹಕಾರಿಯಾಗಿವೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರು ಅರಣ್ಯಕ್ಕೆ ನಾವು ಯಾವುದೇ ಹಾನಿಯನ್ನು ಉಂಟುಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ವನ್ಯಜೀವಿಗಳ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ ಬಿ.ರಾಘವ, ಅರಣ್ಯ ಮತ್ತು ಜೀವಿ ಸಂಕುಲದ ಉಳಿವು ನಮ್ಮೆಲ್ಲರ ಉಳಿವು. ಹಾಗಾಗಿ, ನಾವೆಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿ ಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಬದ್ಧರಾಗಬೇಕು ಎಂದರು.
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರು, ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಅಮೂಲ್ಯ ಸಸ್ಯ ಮತ್ತು ಪ್ರಾಣಿ ಸಂಪತ್ತು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದರು.
ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿಗಳಾದ (ಎಸಿಎಫ್) ಶ್ರೀನಿ ವಾಸ್ ನಾಯಕ್, ಎ.ಎ.ಗೋಪಾಲ್, ಪುಷ್ಪಗಿರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಜೆ.ಅನನ್ಯಕುಮಾರ್, ತಲಕಾವೇರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಕೆ.ಕೊಟ್ರೇಶ್, ಆರ್ಎಫ್ಒ ಕೆ.ಎಂ. ಮರಿಸ್ವಾಮಿ, ಕಚೇರಿಯ ಮೇಲ್ವಿಚಾರಕಿ ಜೆ.ಸಿ. ಕಾಂತಮತಿ, ಡಿಆರ್ಎಫ್ಒಗಳಾದ ಡಿಆರ್ಎಫ್ಒ ಅನಿಲ್ ಡಿಸೋಜ, ಎಂ.ಗಣೇಶ್, ಎನ್.ಎಲ್.ಚೇತನ್, ಆನಂದ್, ಶ್ರೀಧರ್, ಸಿಬ್ಬಂದಿ ಯೋಗೇಶ್, ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಶಿಕ್ಷಕಿ ಎಸ್.ಡಿ. ಅನಿತಾ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ವನ್ಯಜೀವಿ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಎಂಟು ಮಂದಿ ಅರಣ್ಯ ವೀಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವನ್ಯಜೀವಿ ಸಪ್ತಾಹದ ಅಂಗವಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವನ್ಯಜೀವಿ ಸಪ್ತಾಹ : ೨೦೨೩ ರ ಜನಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್, ಎನ್ನೆಸ್ಸೆಸ್ ಘಟಕಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಜಾಗೃತಿ ಮೂಡಿಸಿದವು.